ಕೊರೋನಾ ಸೋಂಕಿನಿಂದ ಮೂವರು ನಿಧನ:376 ಪಾಸಿಟಿವ್

ಕಲಬುರಗಿ.ಏ.14: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮೂವರು ನಿಧನರಾಗಿದ್ದಾರೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಹೃದ್ರೋಗದಿಂದ ಬಳಲುತ್ತಿದ್ದ ಸೇಡಂ ತಾಲೂಕಿನ ಮಳಖೇಡ ಗ್ರಾಮದ 74 ವರ್ಷದ ವೃದ್ಧ ಏ.6 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆಯಿಂದ ಕಲಬುರಗಿ‌ ತಾಲೂಕಿನ ಕುಸನೂರ ಗ್ರಾಮದ 69 ವರ್ಷದ ವೃದ್ಧ ಏ.10 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.11 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಸ್ತಮಾದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ 55 ವರ್ಷದ ಪುರುಷ ಏ.12 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 371 ಜನ ನಿಧನರಾಗಿದ್ದಾರೆ
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 376 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 27205 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 260 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 24602 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.2232 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.