ಕೊರೋನಾ ಸೋಂಕಿನಿಂದ ಮೂವರು ನಿಧನ:488 ಪಾಸಿಟಿವ್

ಕಲಬುರಗಿ.ಏ.16: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ ಮೂವರು ನಿಧನರಾಗಿದ್ದಾರೆ ಎಂದು ಶುಕ್ರವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಭವಾನಿ‌ ನಗರದ 65 ವರ್ಷದ ವೃದ್ಧ (ರೋಗಿ ಸಂ.1119752) ಏ.12 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.14ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಗೊಬ್ಬೂರ ಗ್ರಾಮದ 46 ವರ್ಷದ ಪುರುಷ (ರೋಗಿ ಸಂ.1119784) ಏ.11 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.13 ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಬ್ರಹ್ಮಪುರ ಪ್ರದೇಶದ 71 ವರ್ಷದ ವೃದ್ಧ (ರೋಗಿ ಸಂ.1123382) ಏ.12 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.14ಕ್ಕೆ ನಿಧನ ಹೊಂದಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 375 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 488 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 28317 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 246 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 25037 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.2905 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.