ಕೊರೋನಾ ಸೋಂಕಿನಿಂದ ಮೂವರು ನಿಧನ:560 ಪಾಸಿಟಿವ್

ಕಲಬುರಗಿ.ಏ.17: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ ಮೂವರು ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯ ಕಲಬುರಗಿಯ ಬಸವೇಶ್ವರ ಕಾಲೋನಿಯ 81 ವರ್ಷದ ವೃದ್ಧ (ರೋಗಿ ಸಂ.1100915) ಏ.10 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.14ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ 65 ವರ್ಷದ ವೃದ್ಧೆ (ರೋಗಿ ಸಂ.1100948) ಏ.11 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.16 ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಶ್ವಾಸಕೋಶದಿಂದ ಬಳಲುತ್ತಿದ್ದ ಕಲಬುರಗಿ ನಗರದ ಎನ್.ಆರ್.ಕಾಲೋನಿಯ 72 ವರ್ಷದ ವೃದ್ಧ (ರೋಗಿ ಸಂ.1140164) ಏ.13 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.15ಕ್ಕೆ ನಿಧನ ಹೊಂದಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 378 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 560 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 28877 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 211 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 25248 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.3251 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.