ಕೊರೋನಾ ಸೋಂಕಿನಿಂದ ಮೂವರು ನಿಧನ:901 ಪಾಸಿಟಿವ್

ಕಲಬುರಗಿ.ಏ.28: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ ಮೂವರು ನಿಧನರಾಗಿದ್ದಾರೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಖಮರ್ ಕಾಲೋನಿಯ 74 ವರ್ಷದ ವೃದ್ಧ (ರೋಗಿ ಸಂ.1249481) ಏ.19 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಚಿತ್ತಾಪೂರ ತಾಲೂಕಿನ ಭಾಗೋಡಿ ಗ್ರಾಮದ 41 ವರ್ಷದ ಪುರುಷ (ರೋಗಿ ಸಂ.1294998) ಏ.19 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಯಾದುಲ್ಲಾ ಕಾಲೋನಿಯ 65 ವರ್ಷದ ವೃದ್ಧೆ (ರೋಗಿ ಸಂ.1332894) ಏ.25 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 449 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 901 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 36999 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 752 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 29027 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.7523 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.