ಕೊರೋನಾ ಸೋಂಕಿನಿಂದ ವೃದ್ಧ ನಿಧನ:156 ಪಾಸಿಟಿವ್

Women wearing facemasks as a preventive measure against the COVID-19 coronavirus use their mobile phones outside a metro station in New Delhi on March 19, 2020. (Photo by Jewel SAMAD / AFP) (Photo by JEWEL SAMAD/AFP via Getty Images)

ಕಲಬುರಗಿ.ಮಾ. 30: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ 78 ವರ್ಷದ ವೃದ್ಧ ನಿಧನರಾಗಿದ್ದಾರೆ ಎಂದು ಮಂಗಳವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಎಂ.ಎಸ್.ಕೆ.ಮಿಲ್ ಪ್ರದೇಶದ ನಿವಾಸಿ 78 ವರ್ಷದ ವೃದ್ಧ ಮಾ.27 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಮಾ.29 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 341 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 156 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23832 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 82 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22375 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1116 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.