ಕೊರೋನಾ ಸೋಂಕಿನಿಂದ 11 ಜನ ನಿಧನ:659 ಪಾಸಿಟಿವ್

Indian nursing students wearing masks walk in a group at government run Gandhi Hospital in Hyderabad, India, Friday, March 6, 2020. For weeks India watched as COVID-19 spread in neighboring China and other countries as its own caseload remained static. But with the virus now spreading communally in the country of 1.4 billion and 31 confirmed cases, authorities are scrambling to ready a beleaguered and vastly unequal medical system for a potential surge of patients. (AP Photo/Mahesh Kumar A.)

ಕಲಬುರಗಿ.ಏ.22: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 11 ಜನ ನಿಧನರಾಗಿದ್ದಾರೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಸೇಡಂ ತಾಲೂಕಿನ‌ ಮಳಖೇಡ ಗ್ರಾಮದ 46 ವರ್ಷದ ಪುರುಷ (ರೋಗಿ ಸಂ.1126746) ಏ.14 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಬಿದ್ದಾಪೂರ ಕಾಲೋನಿಯ 40 ವರ್ಷದ ಪುರುಷ (ರೋಗಿ ಸಂ.1142600) ಏ.17 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.22ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಸುವರ್ಣಾ ನಗರದ 83 ವರ್ಷದ ವೃದ್ಧ (ರೋಗಿ ಸಂ.1137863) ಏ.15 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.20ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಅಧಿಕ ರಕ್ತದೊತ್ತಡ ಹಾಗೂ ಮೆದುಳಿಗೆ ರಕ್ತಪೂರೈಕೆ ಸಮಸ್ಯೆಯಿಂದ ಬಳಲುತ್ತಿದ್ದ ಚಿತ್ತಾಪೂರ ತಾಲೂಕಿನ ರಾಜೋಳ ಗ್ರಾಮದ 72 ವರ್ಷದ ವೃದ್ಧ (ರೋಗಿ ಸಂ.1196650) ಏ.20 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಮೆಹಬೂಬ ನಗರದ ಮೆಕ್ಕಾ ಕಾಲೋನಿಯ 72 ವರ್ಷದ ವೃದ್ಧ (ರೋಗಿ ಸಂ.1230941) ಏ.18 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.22ಕ್ಕೆ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಆಳಂದ ಪಟ್ಟಣದ ಹತ್ಯಾನ ಗಲ್ಲಿಯ 72 ವರ್ಷದ ವೃದ್ಧೆ (ರೋಗಿ ಸಂ.1175575) ಏ.15 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ವಿಠ್ಠಲ ನಗರದ 73 ವರ್ಷದ ವೃದ್ಧ (ರೋಗಿ ಸಂ.1236134) ಏ.17 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಆದರ್ಶ‌ ನಗರದ 52 ವರ್ಷದ ಪುರುಷ (ರೋಗಿ ಸಂ.1170202) ಏ.15 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಘವೇಂದ್ರ ಕಾಲೋನಿಯ 81 ವರ್ಷದ ವೃದ್ಧ (ರೋಗಿ ಸಂ.1253544) ಏ.19 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.22ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಸೊನ್ನ ಗ್ರಾಮದ 54 ವರ್ಷದ ಮಹಿಳೆ (ರೋಗಿ ಸಂ.1190776) ಏ.19 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.22ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಶಹಾಬಜಾರ ಪ್ರದೇಶದ ಕಬಾಡಗಲ್ಲಿಯ 57 ವರ್ಷದ ಮಹಿಳೆ (ರೋಗಿ ಸಂ.1087609) ಏ.15 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 410 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 659 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 32295 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 288 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 26184 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.5701 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.