ಕೊರೋನಾ ಸೋಂಕಿನಿಂದ 11 ಜನ ನಿಧನ:957 ಪಾಸಿಟಿವ್

ಕಲಬುರಗಿ.ಏ.29: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 11 ಜನ ನಿಧನರಾಗಿದ್ದಾರೆ ಎಂದು ಗುರುವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಆಳಂದ ತಾಲೂಕಿನ‌ ಮಾದನಹಿಪ್ಪರಗಾ ಗ್ರಾಮದ 46 ವರ್ಷದ ಮಹಿಳೆ (ರೋಗಿ ಸಂ.1414193) ಏ. 24 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ‌ ಬಳಲುತ್ತಿದ್ದ ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ 80 ವರ್ಷದ ವೃದ್ಧೆ (ರೋಗಿ ಸಂ.1317673) ಏ.23 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಕಿಡ್ನಿ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ಪಟ್ಟಣದ 70 ವರ್ಷದ ವೃದ್ಧ (ರೋಗಿ ಸಂ.1285567) ಏ.23 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಗೊಬ್ಬೂರ(ಬಿ) ಗ್ರಾಮದ 60 ವರ್ಷದ ವೃದ್ಧೆ (ರೋಗಿ ಸಂ.1240886) ಏ.19 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.28ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ‌ ಲಾಲಗೇರಿ ಕ್ರಾಸ್ ಪ್ರದೇಶದ 75 ವರ್ಷದ ವೃದ್ಧ (ರೋಗಿ ಸಂ.1362996) ಏ.21 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.29ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಬಡೇಪೂರ ಕಾಲೋನಿಯ 55 ವರ್ಷದ ಮಹಿಳೆ (ರೋಗಿ ಸಂ.1370811) ಏ.22 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.28ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ವಿಶ್ವೇಶ್ವರಯ್ಯ ನಗರದ 74 ವರ್ಷದ ವೃದ್ಧ (ರೋಗಿ ಸಂ.1466194) ಏ.26ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.28ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಗಾಜೀಪುರ ಪ್ರದೇಶದ 66 ವರ್ಷದ ವೃದ್ಧ (ರೋಗಿ ಸಂ.1386311) ಏ.25 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಹಾಗರಗಾ‌ ಕ್ರಾಸ್ ಪ್ರದೇಶದ 80 ವರ್ಷದ ವೃದ್ಧ (ರೋಗಿ ಸಂ.1404485) ಏ.25 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಅಫಜಲಪೂರ ತಾಲೂಕಿನ ಬಡದಾಳ ಗ್ರಾಮದ 65 ವರ್ಷದ ವೃದ್ಧ (ರೋಗಿ ಸಂ.1490994) ಏ.23 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.28ಕ್ಕೆ ನಿಧನ ಹೊಂದಿದ್ದಾರೆ.
ಐ.ಎಲ್.ಐ. ಹಿನ್ನೆಲೆಯಿಂದ ಆಳಂದ ತಾಲೂಕಿನ ಕವಲಗಾ ಗ್ರಾಮದ 70 ವರ್ಷದ ವೃದ್ಧೆ (ರೋಗಿ ಸಂ.1386320) ಏ.27 ರಂದು ಮನೆಯಲ್ಲಿಯೇ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 460 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 957 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 11 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 37956 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 537 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 29564 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.7932 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.