ಕೊರೋನಾ ಸೋಂಕಿನಿಂದ 4 ಜನ ನಿಧನ:1162 ಪಾಸಿಟಿವ್

People pose with a performance artist at a beach amidst the spread of the coronavirus disease (COVID-19) in Mumbai, India, April 4, 2021. REUTERS/Francis Mascarenhas

ಕಲಬುರಗಿ.ಮೇ.4: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 4 ಜನ ನಿಧನರಾಗಿದ್ದಾರೆ ಎಂದು ಮಂಗಳವಾರದ ಆರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಎಂ.ಬಿ.ನಗರದ 43 ವರ್ಷದ ಮಹಿಳೆ (ರೋಗಿ ಸಂ.1516827) ಮೇ.2 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೇ.3ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ‌ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಬಾದನಳ್ಳಿ ಗ್ರಾಮದ 42 ವರ್ಷದ ಪುರುಷ (ರೋಗಿ ಸಂ.1647061) ಏ.30 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೇ.3ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯ 66 ವರ್ಷದ ವೃದ್ಧ (ರೋಗಿ ಸಂ.1686156) ಏ.28 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೇ.3ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಕಾಕಡೆ ಚೌಕ್ ಪ್ರದೇಶದ 58 ವರ್ಷದ ಪುರುಷ (ರೋಗಿ ಸಂ.1688975) ಏ.30 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೇ.3ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 488 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 1162 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 04 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 43291 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 249 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 32776 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.10027 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 04 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 04 ಜನರ ಸಾವಿನೊಂದಿಗೆ ಈ ವರೆಗೆ 488 ಜನರು ಸಾವಿಗೀಡಾದಂತಾಗಿದೆ .