ಕೊರೋನಾ ಸೋಂಕಿನಿಂದ 6 ಜನ ನಿಧನ:1407 ಪಾಸಿಟಿವ್

ಕಲಬುರಗಿ.ಮೇ.1: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 6 ಜನ ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ‌ ದೇವಲ ಗಾಣಗಾಪೂರದ ಗ್ರಾಮದ 60 ವರ್ಷದ ವೃದ್ಧ (ರೋಗಿ ಸಂ.1295013) ಏ.30 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಮೇ.1ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ‌ ಬಳಲುತ್ತಿದ್ದ ಶಹಾಬಾದ ಪಟ್ಟಣದ 66 ವರ್ಷದ ವೃದ್ಧ (ರೋಗಿ ಸಂ.1380509) ಏ.24 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.30ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಅಫಜಲಪೂರ ಪಟ್ಟಣದ 45 ವರ್ಷದ ಪುರುಷ (ರೋಗಿ ಸಂ.1408108) ಏ.23 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.30ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಗಾಬರೆ ಲೇಔಟ್ ಪ್ರದೇಶದ 59 ವರ್ಷದ ಪುರುಷ (ರೋಗಿ ಸಂ.1423107) ಏ.21 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.30ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ರಾಜಾಪುರ ಪ್ರದೇಶದ 40 ವರ್ಷದ ಪುರುಷ (ರೋಗಿ ಸಂ.1432174) ಏ.24 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.30ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ, ಕಿಡ್ನಿ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಮ್ ಮಂದಿರ ಬಳಿಯ ನಿವಾಸಿ 41 ವರ್ಷದ ಮಹಿಳೆ (ರೋಗಿ ಸಂ.1540724) ಏ.27 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಮೇ.1ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 472 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 1407 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 06 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 40619 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 807 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 31159 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.8988 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.