ಕೊರೋನಾ ಸೋಂಕಿನಿಂದ 7 ಜನ ನಿಧನ:772 ಪಾಸಿಟಿವ್

ಕಲಬುರಗಿ.ಏ.27: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 7 ಜನ ನಿಧನರಾಗಿದ್ದಾರೆ ಎಂದು ಮಂಗಳವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಹಳೇ ಜೇವರ್ಗಿ ರಸ್ತೆಯ ದೇವಿ ನಗರದ 85 ವರ್ಷದ ವೃದ್ಧ (ರೋಗಿ ಸಂ.1215704) ಏ.19 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಗುಬ್ಬಿ‌ ಕಾಲೋನಿಯ 75 ವರ್ಷದ ವೃದ್ಧ (ರೋಗಿ ಸಂ.1229312) ಏ.20 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ 51 ವರ್ಷದ ಪುರುಷ (ರೋಗಿ ಸಂ.1299622) ಏ.24 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಹಳೇ‌ ಜೇವರ್ಗಿ ರಸ್ತೆಯ ಅಲ್ ಶರೇ ಕಾಲೇಜಿನ ಎದುರುಗಡೆ ಪ್ರದೇಶದ 60 ವರ್ಷದ ವೃದ್ಧೆ (ರೋಗಿ ಸಂ.1304862) ಏ.26 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹದಿಂದ ಬಳಲುತ್ತಿದ್ದ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ 47 ವರ್ಷದ ಪುರುಷ (ರೋಗಿ ಸಂ.1404496) ಏ.26 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.27ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಿಂದ ಆಳಂದ ತಾಲೂಕಿನ ಹಡಲಗಿ ಗ್ರಾಮದ 60 ವರ್ಷದ ವೃದ್ಧೆ (ರೋಗಿ ಸಂ.1414226) ಏ.24 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.25ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಹೃದ್ರೋಗ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ವಾಡಿ ಪಟ್ಟಣದ 78 ವರ್ಷದ ವೃದ್ಧ (ರೋಗಿ ಸಂ.1428158) ಏ.25 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.26ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 446 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 772 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 36098 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 541 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 28275 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.7377 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.