ಕೊರೋನಾ ಸೋಂಕಿನಿಂದ 8 ಜನ ನಿಧನ:757 ಪಾಸಿಟಿವ್

ಕಲಬುರಗಿ.ಏ.21: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ 8 ಜನ ನಿಧನರಾಗಿದ್ದಾರೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಸರಸ್ವತಿ ಕಾಲೋನಿಯ 67 ವರ್ಷದ ವೃದ್ಧ (ರೋಗಿ ಸಂ.1116428) ಏ.14 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.17ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ರಾಜಾಪುರ ಪ್ರದೇಶದ 55 ವರ್ಷದ ಮಹಿಳೆ (ರೋಗಿ ಸಂ.1152301) ಏ.15 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.20ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ಜನತಾ ಲೇಔಟ್ ಪ್ರದೇಶದ 79 ವರ್ಷದ ವೃದ್ಧ (ರೋಗಿ ಸಂ.1153631) ಏ.16 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.19ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ‌ ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದ 70 ವರ್ಷದ ವೃದ್ಧೆ (ರೋಗಿ ಸಂ.1163750) ಏ.17 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.19ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಘಾಟಗೆ ಲೇಔಟ್ ಪ್ರದೇಶದ 48 ವರ್ಷದ ಮಹಿಳೆ (ರೋಗಿ ಸಂ.1177283) ಏ.15 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.20ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಸಂತೋಷ‌ ಕಾಲೋನಿಯ 64 ವರ್ಷದ ವೃದ್ಧ (ರೋಗಿ ಸಂ.1190803) ಏ.15 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.19ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಆಳಂದ ಪಟ್ಟಣದ ಭೀಮ‌ ನಗರದ 38 ವರ್ಷದ ಪುರುಷ (ರೋಗಿ ಸಂ.1227801) ಏ.18 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.21ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಕೋಟೆ ರಸ್ತೆಯ 73 ವರ್ಷದ ವೃದ್ಧ (ರೋಗಿ ಸಂ.1244007) ಏ.20 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 399 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 757 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 31636 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 121 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 25896 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.5341 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.