ಕೊರೋನಾ ಹೆಚ್ಚಳ ಏ.18 ಸರ್ವಪಕ್ಷ ಸಭೆ: ರಾಜ್ಯದಲ್ಲಿ ಲಾಕ್ ಡೌನ್‌ ಇಲ್ಲ‌: ಸಿಎಂ

ಬೆಂಗಳೂರು,ಏ. 13- ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇದೇ ತಿಂಗಳ 18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೊರೋನೋ ಸೋಂಕು ಕುರಿತ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಮೇ ತಿಂಗಳ ಎರಡವರೆಗೆ ರಾಜ್ಯದಲ್ಲಿ ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಲಿದೆ ಎಂದು ಅಂದಾಜು ಮಾಡಿದೆ. ಇವಾಗ ಜನರು ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಮಾರ್ಗಸೂಚಿಗಳನ್ನು ಪಾಲಿಸಲು ಒತ್ತು ನೀಡಬೇಕು ಎಂದು ಕೂಡ ಅವರು ತಿಳಿಸಿದ್ದಾರೆ.