
ನವದೆಹಲಿ, ಏ. 5 – ದೇಶದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8 ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದು ಕೋವಿಡ್ -19 ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವ ಸಾದ್ಯತೆ ಇದೆ.
ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣವನ್ನು ಹೆಚ್ಚಳ ಮಾಡುವ ಕುರಿತು ಸಲಹೆ ಸೂಚನೆ ನೀಡಲಿದ್ದಾರೆ.
ಮಹಾರಾಷ್ಟ್ರ, ಕರ್ನಾಟಕ, ಕೇರಳ,ಪಂಜಾಬ್, ತಮಿಳುನಾಡು, ಚಂಢೀಗಡ,ಛತ್ತೀಸ್ ಗಡ, ದೆಹಲಿ ಪಶ್ವಿಮ ಬಂಗಾಳ ಸೇರಿದಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕು ಹೆಚ್ಚು ತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಈ ರಾಜ್ಯಗಳಿಗೆ ವಿಶೇಷ ಸೂಚನೆ ನೀಡುವ ಸಾದ್ಯತೆ ಇದೆ
ದೇಶದ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ದಿನವೊಂದಕ್ಕೆ 1 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ.ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತಷ್ಡು ಚಿಂತೆಗೆ ಗುರಿ ಮಾಡಿದೆ.
ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ಸಿಲುಕುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ. ಹೊರಡಿಸಿವು ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ ಕ್ರಮ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆಗಳಿವೆ.
ನಿನ್ನೆ ಸಭೆ ಉನ್ನತ ಮಟ್ಟದ ಪರಾಮರ್ಶೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಪರೀಕ್ಷೆ, ಪತ್ತೆ, ಚಿಕಿತ್ಸೆ, ಸೂಕ್ತ ವರ್ತನೆ ಪಾಲನೆ ಹಾಗು ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳ ಮಾಡುವಂತೆ ಸೂಚಿಸಿದ್ದರು.
ಏಪ್ರಿಲ್ 8 ರಂದು ಮುಖ್ಯಮಂತ್ರಿ ಗಳ ಜೊತೆ ನಡೆಯುವ ವಿಡಿಯೋ ಸಂವಾದದ ವೇಳೆ ಈ ಸೂಚನೆ ನೀಡುವ ಎಲ್ಲಾ ಸಾದ್ಯತೆಗಳೂ ಇವೆ.