ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ

ಕೋಲಾರ,ಮೇ.೨೯- ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕೋಲಾರ ಜಿಲ್ಲಾ ಬೆಸ್ತರ (ಗಂಗಾ ಮತಸ್ಥರ) ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಜಿಲ್ಲಾಧಿಕಾರಿ ಅಕ್ರಂಪಾಷ ಅವರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂಜಲಿ ಅಂಬಿಗೇರ ಕೊಲೆ ಘಟನೆ ಖಂಡಿಸಿ ಹಾಗೂ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋಲಾರ ಜಿಲಾ ಗಂಗಾಮತಸ್ಥರ(ಬೆಸ್ತರ) ಸಂಘದ ವತಿಯಿಂದ ಈ ಮೂಲಕ ತಮ್ಮಲ್ಲಿ ಆಗ್ರಹಿಸುತ್ತೇವೆ. ಆಂಜಲಿ ಅಂಬಿಗೇರ್ ಮನೆಗೆ ಆರೋಪಿ ಗಿರೀಶ್ ಸಾವಂತ್‌ಯಲ್ಲಾಪುರ ಬೇಟಿ ನೀಡಿ ಪ್ರೀತಿಸುವಂತೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಅಲ್ಲದೆ ನೇಹಾ ಹಿರೇಮಠಳಂತೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ, ಈ ಬಗ್ಗೆ ಪೋಲಿಸರಿಗೆ ದೂರು ನೀಡಲಾಗಿತ್ತು, ಆದರೆ ಪೋಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕೊನೆಗೆ ಅಂಜಲಿಯ ಮನೆಗೆ ನುಗ್ಗಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಇಂಥ ಕ್ರೂರ ಆರೋಪಿ ಗಿರೀಶ್ ಸಾವಂತಗೆ ಅತ್ಯಂತ ಕಠಿಣ ಶಿಕ್ಷೆ ಕೊಡಬೇಕೆಂದು ಎಂದು ಆಗ್ರಹಿಸುತ್ತೇವೆ. ಹಾಗೂ ಅಂಜಲಿ ಅಂಬಿಗೇರ್ ಕುಟುಂಬಕ್ಕೆ ಕೂಡಲೇ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ.
ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಮೃತಳ ಸಹೋದರಿಗೆ ಸರ್ಕಾರಿ ನೌಕರಿ ನೀಡಬೇಕು, ವಾಸಕ್ಕೆ ಸರ್ಕಾರದಿಂದ ಮನೆ ಮಂಜೂರು ಮಾಡಬೇಕು. ಕುಟುಂಬಕ್ಕೆ ರಕ್ಷಣೆ ಒದಗಿಸಬೇPಕೆಂದು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಕೋಲಾರ ಜಿಲ್ಲಾ ಬೆಸ್ತರ (ಗಂಗಾ ಮತಸ್ಥರ ಕ್ಷೇಮಾಭಿವೃದ್ಧಿ ಸಂಘ ದ ಅಧ್ಯಕ್ಷ ಮುನಿಕೃಷ್ಣ ಜಿ, ಶ್ರೀನಾಥ್, ಶ್ರೀಧರ್, ನ್ಯಾತಪ್ಪ, ಕೃಷ್ಣಪ್ಪ, ಮಧು, ಗಣೇಶ್, ಮುರಳಿ, ನವೀನ್, ಶಶಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.