ಕೊಳಗಲ್ಲು  ಎರ್ರಿತಾತ ದೇವಸ್ಥಾನದ ಗೋಪುರಕ್ಕೆ ಕಳಸ ಪ್ರತಿಷ್ಠಾಪನೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ ಅ, 19: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಸದ್ಗುರು  ಎರ್ರಿತಾತನವರ ದೇವಸ್ಥಾನದ ನೂತನ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ನಿನ್ನೆ  ಸಕಲ ಭಕ್ತಾದಿಗಳು ಸಮ್ಮುಖದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾಗವಹಿಸಿ  ಎರ್ರಿತಾತನವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ದರ್ಶನ ಪಡೆದರು. ನಂತರ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಸಾದ ನಿಲಯವನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾಂಗ್ರೆಸ್ ಮುಖಂಡರುಗಳಾದ ಬಿ.ವೆಂಕಟೇಶ್ ಪ್ರಸಾದ್, ಹುಲುಗಪ್ಪ, ಪ್ರಭು ರೆಡ್ಡಿ, ಹನುಮಂತ, ನಾಗಿರೆಡ್ಡಿ, ಯು.ಎರ್ರಿಸ್ವಾಮಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ನೂತನ ಪ್ರಸಾದ ನಿಲಯದ ಕಟ್ಟಡವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ  ಎರ್ರಿತಾತನವರ ದೇವಸ್ಥಾನದ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಊರಿನ ಮುಖಂಡರಾದ ಹನುಮಂತಪ್ಪ, ಹುಲುಗಪ್ಪ, ನಾಗರೆಡ್ಡಿ, ಗೋವಿಂದ ಸೇರಿದಂತೆ ಮುಂತಾದ ಸಕಲ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.