ಕೊಳಗಲ್ ನಲ್ಲಿ ಎತ್ತಿನ ಬಂಡಿಗಳಿಂದ ಮತದಾನ ಜಾಗೃತಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.13: ಮತದಾನದ ಪ್ರಮಾಣ ಹೆಚ್ಚಿಸಲು ಬಳ್ಳಾರಿ ಜಿಲ್ಲೆಯ ಹಳ್ಳಿಗಳಲ್ಲಿ ಎತ್ತಿನ ಬಂಡಿಗಳ ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ.
.ಸ್ವೀಪ್ ಸಮಿತಿಯಿಂದ ಬಳ್ಳಾರಿ ತಾಲೂಕಿನ  ಕೊಳಗಲ್ಲು ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ನಿನ್ನೆ  ಸಂಜೆ ಯಾರೊಬ್ಬರೂ ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಎತ್ತನ ಬಂಡಿ ಜಾಥಾ ನಡೆಯಿತು.
ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ  ರಾಹುಲ್ ಶರಣಪ್ಪ ಸಂಕನೂರು ಅವರು.
ಪ್ರಜಾಪ್ರಭುತ್ವ ಸದೃಢತೆಗೆ ಮತದಾನ ಒಂದು ಅಮೂಲ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು.
ಕೊಳಗಲ್ ಗ್ರಾಮದಲ್ಲಿ 9 ಮತಗಟ್ಟೆಗಳಿದ್ದು,  10,097 ಮತದಾರರಿದ್ದಾರೆ. ಈ ಹಿಂದೆ ಗ್ರಾಮದಲ್ಲಿ ಶೇಕಡಾವಾರು ಕಡಿಮೆ ಮತದಾನವಾಗಿದ್ದು, ಈ ಬಾರಿ ಶೇ.100 ರಷ್ಟು ಮತದಾನವಾಗಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದರು.
ಮತದಾನ ಜಾಗೃತಿ ಮೂಡಿಸಲು ಭಾಗವಹಿಸಿದ್ದ ಎತ್ತಿನ ಬಂಡಿಗಳಿಗೆ ಹೂ, ತಳಿರು ತೋರಣ, ಬಣ್ಣದ ಬಲೂನ್‍ಗಳ ಮೂಲಕ ಸಿಂಗಾರಗೊಳಿಸಲಾಗಿತ್ತು.  ಮತದಾನ ಅರಿವು ಮೂಡಿಸುವ ಮಾಹಿತಿ ಫಲಕಗಳನ್ನು ಸಹಹಾಕಲಾಗಿತ್ತು. 40ಕ್ಕೂ ಅಧಿಕ ಎತ್ತಿನ ಬಂಡಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದವು.
ಓಟ್ ಮಾಡಿದವನೇ ಹೀರೋ, ನಿಮ್ಮ ಮತ – ನಿಮ್ಮ ಭವಿಷ್ಯ, ಜನ ಸಾಮಾನ್ಯರ ಶಕ್ತಿ ಮತ ಚಲಾವಣೆ, ಮತದಾನ ಮಾಡಿದವನೇ ಶೂರ, ಪ್ರಜಾಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ ಎನ್ನುವ ಮತದಾನ ಜಾಗೃತಿ ಮೂಡಿಸುವ ಫಲಕಗಳು ರಾರಾಜಿಸಿದವು.
ಜಾಥಾ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು.