ಕೊಳವೆ ಬಾವಿಗಳಿಗೆ ಪಂಪ್‌ಸೆಟ್ ವಿತರಣೆ

ಅರಕೇರಾ.ಜ.೦೨- ದೇವದುರ್ಗ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಶಿವನಗೌಡ ನಾಯಕ ಅವರು ನಮ್ಮ ರೈತರ ಬದುಕು ಸದಾ ಹಸಿರಾಗಿರಬೇಕು ಎಂಬ ಪ್ರಯತ್ನದಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ೨೦೧೮-೧೯ ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ೩೮ ಜನ ಪರಿಶಿಷ್ಟ ಪಂಗಡದ ಫಲಾನುಭಾವಿಗಳಿಗೆ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ಲಭಿಸುವಂತೆ ಮಾಡುವ ಮೂಲಕ ಕ್ಷೇತ್ರದ ಅನ್ನದಾತರ ಬದುಕಿಗೆ ಆಸರೆಯಾಗಿದ್ದಾರೆ ಎಂದರು.
ಇದೇ ವೇಳೆ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ಸುಮಾರು ೩೮ ಜನ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಣೆಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ಅಧಿಕಾರಿ ಟಿ. ಪ್ರಭಾಕರ್, ಬಿಜೆಪಿ ಹಿರಿಯ ಮುಖಂಡರಾದ ಕೆ.ಅನಂತರಾಜ ನಾಯಕ, ಶರಣಗೌಡ ಬಿ.ಗಣೇಕಲ್, ಶಿವಣ್ಣ ಪೈಕಾರ್ ಪಿಲಿಗುಂಡ, ನಾಗರಾಜ ಕರ್ನಾಳ, ನಾಗರಾಜ ನಾಯಕ, ಮುಂತಾದವರು ಉಪಸ್ಥಿತರಿದ್ದರು.