ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಕರೆ

ಹೊನ್ನಾಳಿ.ಮಾ.೨೭; ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದು ಜನರು ಇದರ ಸದುಪಯೋಗ ಪಡೆದುಕೊಂಡು ಕೊರೊನಾದಿಂದ ದೂರ ಉಳಿಯುವಂತೆ ಸಂಸದ ಜಿ.ಎಂ.ಸಿದ್ದೇಶ್ವರ್ ಮನವಿ ಮಾಡಿದರು.ತಾಲೂಕು ಆಸ್ಪತ್ರೆಗೆ ಸಂಸದ ಜಿ.ಎಂ.ಸಿದ್ದೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದಿಡೀರ್ ಭೇಟಿ ನೀಡಿ ಕೊರೊನಾ ಲಸಿಕೆ ಪಡೆದವರ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರಲ್ಲದೇ, ಅಧಿಕಾರಿಗಳ ಬಳಿ ಲಸಿಕೆ ಬಗ್ಗೆ ಮಾಹಿತಿ ಪಡೆದರು.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 45 ವರ್ಷ ಮೇಲ್ಪಟ್ಟ 60 ವರ್ಷದ ಒಳಗಿನ ರಕ್ತದೊತ್ತಡ, ಮದುಮೇಹ ಇರುವವರಿಗೆ ಉಚಿತವಾಗಿ ಕೊರುನಾ ಲಸಿಕೆ ನೀಡುತ್ತಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೇ ಮಾತನಾಡಿದ ಸಂಸದರು ಇದೂವರೆಗೂ ತಾಲೂಕು ಆಸ್ಪತ್ರೆಯಲ್ಲಿ 1650 ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗಿದೆ ಎಂದ ಸಂಸದರು ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಹಾಕಿಕೊಳ್ಳುವಂತೆ ತಿಳಿಹೇಳಿದರು.ಇದೇ ವೇಳೆ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕೊರೊನಾವನ್ನು ಜನರು ನಿರ್ಲಕ್ಷಿಸುವುದನ್ನು ಬಿಡ ಬೇಕು, ಕೊರೊನಾ ಕೊರೊನಾವನ್ನು ನಿರ್ಲಕ್ಷಿಸಿ ಮನೆಯಿಂದ ಹೊರ ಬಂದರೆ ಕೊರೊನಾ ನಿಮ್ಮ ಮನೆ ಒಳಗೆ ಬರುತ್ತದೆ ಎಂದರು.ಕೊರೊನಾ ಲಸಿಕೆ ಪಡೆದರೆ ಅಡ್ಡ ಪರಿಣಾಮ ಉಂಟಾಗುತ್ತದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ, ಯಾರೂ ಕೂಡ ಇದಕ್ಕೇ ಕಿವಿಕೊಡದೇ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.ಸರ್ಕಾರಗಳು ಲಸಿಕೆಗಳನ್ನು ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದ್ದು ಜನರು ಇದರ ಸದುಪಯೋಗ ಪಡೆದುಕೊಂಡು ಕೊರೊನಾದಿಂದ ದೂರ ಉಳಿಯುವಂತೆ ಸಲಹೆ ನೀಡಿದರು.