ಕೊಹಿನೂರ ಸಂಸ್ಥೆಯಲ್ಲಿ ತಾತ್ಯಾ ಟೋಪೆ ಸ್ಮರಣೋತ್ಸವ

ಕಲಬುರಗಿ:ಎ.18: ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಸ್ವಾತಂತ್ರ್ಯ ಹೋರಾಟಗಾರ ತಾತ್ಯಾ ಟೋಪೆ ಸ್ಮರಣೋತ್ಸವ ಜರುಗಿತು.
ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಘತ್ತರಗಿ, ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಸದಸ್ಯ ಶಿವಯೋಗಪ್ಪ ಬಿರಾದಾರ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.