ಕೊ.ಸಂಪಾಜೆ: ಬಿಜೆಪಿ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮಾವೇಶ

ಸುಳ್ಯ, ಎ.೨೭- ಕೊಡಗು ಸಂಪಾಜೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಸಮಾವೇಶ ಮತ್ತು ಭೂ ಸಪೋಷಣಾ ಹಾಗೂ ಜಲ ಸಂರಕ್ಷಣೆ ಅಭಿಯಾನವು ಕೊಡಗು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಭೋಪಯ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ರಾಜ್ಯ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್, ಬಿಜೆಪಿ ರಾಜ್ಯ ರೈತಮೋರ್ಚಾ ಸಮಿತಿ ಸದಸ್ಯೆ ಯಮುನ, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಕೊಡಗು ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾರ ಚಿದ್ಕಾರ್, ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಮಡಿಕೇರಿ ಎ.ಪಿ.ಎಂ.ಸಿ. ನಿರ್ದೇಶಕ ಬೆಪ್ಪುರನ ಮೇದಪ್ಪ ಉಪಸ್ಥಿತರಿದ್ದರು.