ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

 

ಚಿತ್ರದುರ್ಗ. ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಸೋಮವಾರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಹೊಳಲ್ಕೆರೆ ನಗರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ ದಂಡ ವಿಧಿಸಿದೆ.ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 20 ಕೇಸುಗಳನ್ನು ದಾಖಲಿಸಿ ರೂ. 1950 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 07 ಕೇಸುಗಳನ್ನು ದಾಖಲಿಸಿ ರೂ. 600 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 01 ಕೇಸುಗಳನ್ನು ದಾಖಲಿಸಿ ರೂ. 100 ದಂಡವನ್ನು ವಸೂಲಿ ಮಾಡಲಾಯಿತು.ತಂಬಾಕು ದಾಳಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ.ರಂಗನಾಥ್, ಕೆಎಸ್‍ಆರ್‍ಟಿಸಿ ಟಿಸಿ ಕೆ.ಪಿ.ಗಂಗಾಧರಪ್ಪ, ಶಿಕ್ಷಣ ಇಲಾಖೆಯ ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿ ಶೋಕತ್, ಪೊಲೀಸ್ ಇಲಾಖೆಯ ಎಂ.ಸುರೇಶ್ ಇದ್ದರು.
======