ಕೋಡಿಹಳ್ಳಿ ಸವಿಮಾತುಗಳಿಗೆ ಮರುಳಾಗದಿರಿ: ಪ್ರತಾಪ್ ಸಿಂಹ

ಮೈಸೂರು: ಏ.08: ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಈಗ ಕೆಎಸ್‍ಆರ್‍ಟಿಸಿ ನೌಕರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ತಮ್ಮ ಸ್ವಾರ್ಥಕ್ಕಾಗಿ ರೈತ ಸಂಘವನ್ನು ಬಳಸಿಕೊಂಡು ರೈತರಲ್ಲ ಭಿನ್ನಬಿಪ್ರಾಯ ಮೂಡಿಸಿರುವುದು ಎಲ್ಲಾರಿಗೂ ತಿಳಿದಿರುವ ಸಂಗತಿಯಾಗಿದ್ದು ಇದೇ ಪರಿಸ್ಥತಿ ನಿಮಗೂ ಆಗಲಿದೆ. ಜಾಸ್ತಿ ಕೆಲಸ ಮಾಡುವ ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ. ಆ ಪ್ರೀತಿಯನ್ನು ನೀವು ಕಳೆದುಕೊಳ್ಳಬೇಡಿ, ಹಾಗಾಗಿ ಅವರ ಸವಿಮಾತುಗಳಿಗೆ ಮರುಳಾಗದಿರಿ ಎಂದು ಸಂಸದರು ನುಡಿದರು.
ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣ ರೌಂಡ್ ಹಾಕಿ ಪರಿಶೀಲನೆ ನಡೆಸಿದ ಸಂಸದ ಪ್ರತಾಪ್‍ಸಿಂಹ. ಪೆÇ್ರ. ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರು ಇದ್ದಾಗ ರೈತ ಮುಂಡರು, ಹೋರಾಟದ ಬಗ್ಗೆ ಗೌರವವಿತ್ತು. ಅವರಿಬ್ಬರೂ ಅಸ್ತಂಗತ ಆದ ನಂತರ ಈಗ ಅಂತಹ ಮುಖ ಆ ಹೋರಾಟದಲ್ಲಿ ಇಲ್ಲ. ನಾವು ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಆಗುತ್ತಿದೆ. ಕೆಎಸ್‍ಆರ್ಟಿಸಿ ನೌಕರರು ರಾಜ್ಯ ಸರ್ಕಾರ ಸಂಕಷ್ಟದಲ್ಲಿ ಇರುವಾಗ ಈ ರೀತಿ ಹೋರಾಟಕ್ಕೆ ಇಳಿಯುವುದು ತಪ್ಪು ಎಂದರು.
ಇದು ಮುಂದುವರಿದರೆ ಜನರೇ ಈ ವಿಭಾಗದಲ್ಲೂ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನ ಈ ರೀತಿ ಧ್ವನಿ ಎತ್ತುವಂತೆ ಮಾಡಬೇಡಿ. ಜಾಸ್ತಿ ಕೆಲಸ ಮಾಡುವ ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ. ಆ ಪ್ರೀತಿ ಕಳೆದು ಕೊಳ್ಳಬೇಡಿ. ಎಸ್ಮಾ ಜಾರಿ ಮಾಡಿ ಬಲವಂತವಾಗಿ ಕೆಲಸಕ್ಕೆ ಹಾಜರಾಗುವಂತಹ ಪರಿಸ್ಥಿತಿ ತಂದು ಕೊಳ್ಳಬೇಡಿ. ಎಸ್ಮಾ ಜಾರಿಯ ಅನಿರ್ವಾಯತೆಯನ್ನು ಸರ್ಕಾರಕ್ಕೆ ತಂದಿಡಬೇಡಿ ಎಂದು ಮನವಿ ಮಾಡಿಕೊಂಡರು.
ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗ ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎನ್ನುತ್ತಿದ್ದಾರೆ. ಆದ್ರೆ ಅವರ ಅಧಿಕಾರವಧಿಯಲ್ಲೇ ಅವರು ಈ ಕೆಲಸ ಮಾಡಬಹುದಿತಲ್ವಾ? ಅಂದು 5 ವರ್ಷ ಜನ ಕಾಲಾವಕಾಶ ಕೊಟ್ಟಿದ್ದರು ತಾನೆ. ಆಗ ಎಲ್ಲ ನಿಗಮಗಳ ನೌಕರರರನ್ನ ಸರ್ಕಾರಿ ನೌಕರರನ್ನಾಗಿ ಮಾಡಬಹುದಿತ್ತು ಅಲ್ವಾ. ಸಿದ್ದರಾಮಯ್ಯ ಅವರ ಇವತ್ತಿನ ಮಾತನ್ನು ಜನರು ಮೆಚ್ಚಲ್ಲ. ಅವರ ಆತ್ಮಸಾಕ್ಷಿಯೂ ಮೆಚ್ಚಲ್ಲ ಎಂದು ಸಿದ್ದುಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು.