ಕೋನಾಪುರ ಪೇಟೆಯಲ್ಲಿ ಸಡಗರದಿಂದ ಕ್ರಿಸ್‌ಮಸ್ ಆಚರಣೆ

ಮಾನ್ವಿ.ಡಿ-೨೫ ಕ್ರೈಸ್ತ ಬಾಂಧವರು ಪಟ್ಟಣದ ಕೋನಾಪುರಪೇಟೆಯ ಸೇಂಟ್ ಮೇರಿಸ್ ಚರ್ಚ್‌ನಲ್ಲಿ ಇಂದು ಬೆಳಿಗ್ಗೆ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಯೇಸು ಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ನಿನ್ನೆ ರಾತ್ರಿ ವಿಶೇಷ ಪೂಜೆ ಸಲ್ಲಿಸಿ ಕ್ರಿಸ್ಮಸ್ ಕೇಕ್ ಕತ್ತರಿಸಿ ಇಂದು ಬೆಳಿಗ್ಗೆಯಿಂದಲೇ ಚರ್ಚ್‌ಗೆ ತೆರಳಿ ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳಾದ ವಂದನೆ ಫಾ.ಜ್ಞಾನಪ್ರಕಾಶಂ ಅವರ ಸಮ್ಮುಖದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗುವ ಮೂಲಕ ಶಾಂತಿ ಪ್ರೀಯಾ ಯೇಸುವಿನಲ್ಲಿ ಭಕ್ತಿ ಪೂರ್ವಕ ಪ್ರಣಾಮಗಳನ್ನು ಅರ್ಪಿಸಿದರು.
ಚರ್ಚ್ ಆವರಣದಲ್ಲಿ ನಿರ್ಮಿಸಿರುವ ಬಾಲ ಯೇಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿ ಎಲ್ಲರ ಗಮನ ಸೆಳೆಯಿತು. ಕ್ರೈಸ್ತರ ಮನೆ ಮನೆಗಳಲ್ಲಿ ಬಾಲ ಯೇಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿ ನಿರ್ಮಿಸಿ, ವಿದ್ಯುತ್ ದಿಪಾಲಂಕಾರ ಮಾಡಿದ್ದರು. ಪ್ರತಿ ಮನೆಯಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.
ಈ ಸಂದರ್ಭದಲ್ಲಿ ಧರ್ಮಗುರು ಫಾ.ಜ್ಞಾನಪ್ರಕಾಶಂ, ಸಿಸ್ಟರ್ ವಲಸಾ, ಶಾಸಕ ರಾಜಾವೆಂಕಟಪ್ಪ ನಾಯಕ, ಜೆಡಿಎಸ್ ಯುವ ಮುಖಂಡ ರಾಜಾರಾಮಚಂದ್ರ ನಾಯಕ, ಪುರಸಭೆ ಸದಸ್ಯರಾರ ಭಾಷ ಸುಪ್ರೀಮ್ ಟೈಲರ್, ಶರಣಪ್ಪಮೇದಾ, ಮುಖಂಡರಾದ ಶಿವರಾಜ ನಾಯಕ, ಪತ್ರೇಪ್ಪ, ಪಿ.ರವಿಕುಮಾರ, ಜೆ.ಹೆಚ್.ದೇವರಾಜ, ಜಯಪ್ರಕಾಶ, ಪ್ರವೀಣ ಕುಮಾರ, ಜಾನೇಪ್ಪ ಜಗ್ಲಿ, ಅನೀಲ ಕುಮಾರ ಭಂಡಾರಿ ಸೇರಿದಂತೆ ಅನೇಕರಿದ್ದರು.