ಕೋರೊನಾ ನಿರ್ವಹಣೆ: ಶ್ವೇತಪತ್ರ ಹೊರಡಿಸಿ: ಸರ್ಕಾರಕ್ಕೆ ಸಿದ್ದು ಒತ್ತಾಯ

ಬೆಂಗಳೂರು,ಏ.19- ರಾಜ್ಯದಲ್ಲಿ ಕೊರೊನಾ ಸೋಂಕು ಎದುರಿಸಲು ಬಿಜೆಪಿ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಿ ಎಂದು ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಸೋಂಕು ನಿಯಂತ್ರಣಕ್ಕೆ ಯಾವೆಲ್ಲ ಕಣ್ಣುಗಳನ್ನು ಸರ್ಕಾರ ಕೈಗೊಂಡಿದೆ ಅನ್ನುವುದನ್ನ ಜನರ ಮುಂದಿದೆ ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂಬಂದ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ ಎಂದಿದ್ದಾರೆ.

ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಈ ಸಮಯದಲ್ಲಿ ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದಾರೆ,‌
ರಾಜ್ಯ ಬಿಜೆಪಿ ಸರ್ಕಾರ ಐ.ಸಿ.ಯು ನಲ್ಲಿದೆ‌ ಎಂದು ತಿಳಿಸಿದ್ದಾರೆ.

ಕೋರೋನಾ ಭ್ರಷ್ಟಾಚಾರಕ್ಕೆ ಬಳಕೆ:

ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕೂತಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ

ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ಹೇಳಿದ್ದಾರೆ