ಕೋರೋನಾ‌ ಐಯುಸಿಯು ಗೆ ಅಹಮದ್ ಪಟೇಲ್ ದಾಖಲು

ನವದೆಹಲಿ, ನ.15- ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರನ್ನು ದೆಹಲಿಯ ಹೊರಹೊಲದ ಗುರು ಗ್ರಾಮದ ಮೇದಾಂತ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.

ಐಸಿಯು ಘಟಕದಲ್ಲಿ ಅಹಮದ್ ಪಟೇಲ್ ಅವರನ್ನು ದಾಖಲು ಮಾಡಿರುವ ಬಗ್ಗೆ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಅಹಮದ್ ಪಟೇಲ್ ಅವರ ಪುತ್ರ ಫೈಸಲ್. ಕುಟುಂಬದ ಜೊತೆ ಚರ್ಚಿಸಿ ಈ ವಿಷಯವನ್ನು ತಿಳಿಸಿದ್ದಾರೆ. ಅಹಮದ್ ಪಟೇಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೇದಾಂತ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೊರೊನೋ ಸೋಂಕಿನಿಂದ ಬಳಲುತ್ತಿರುವ ಅಹಮದ್ ಪಟೇಲ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇದೀಗ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅವರ ಆರೋಗ್ಯ ಚೇತರಿಕೆಗೆ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಪ್ರಾರ್ಥಿಸುವಂತೆ ಪುತ್ರ ಫೈಸಲ್ ಪಟೇಲ್ ತಿಳಿಸಿದ್ದಾರೆ.

ಅಕ್ಟೋಬರ್ 1ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಾಟೀಲ್ ಅವರು ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು.

ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಆದ ಹಿನ್ನೆಲೆಯಲ್ಲಿ ತೀವ್ರ ನಿಗಾಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ