ಕೋರೋನ ಹರಡದಂತೆ ಕಟ್ಟೆಚರ ವಹಿಸಿ : ಪ್ರಭು ಚವ್ಹಾಣ

ಔರಾದ :ಎ.29: ಕೊರೋನ ಮಹಾಮಾರಿ ಗಡಿ ತಾಲ್ಲುಕಿನಲ್ಲಿ ತೀವ್ರವಾಗಿ ಹರಡುತ್ತಿರುವ ಪ್ರಯುಕ್ತ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದರು.

ಔರಾದ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಔರಾದ ಹಾಗೂ ಕಮಲನಗರ ತಾಲ್ಲೂಕಿನ ಅಧಿಕಾರಿಗಳಿಗೆ ಸಚಿವರಾದ ಪ್ರಭು ಬಿ. ಚವ್ಹಾಣ ಅವರು ಕೋವಿಡ್ ಎರಡನೇ ಅಲೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ತಾಲ್ಲೂಕು ಮಟ್ಟದ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಚರ್ಚೆ ನಡೆಸಿದರು

ತಾಲೂಕಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ ಜನರಲ್ಲಿ ಅರಿವು ಮೂಡಿಸಬೇಕು ಮತ್ತು ತಾಲ್ಲೂಕಿನ ಆಸ್ಪತ್ರೆಯಲ್ಲಿ ಆಕ್ಸಿಜನ್, ರೆಮಿಡಿಸಿವರ ಲಸಿಕೆ, ಔಷಧಿ, ಬೆಡಗಳ ವ್ಯವಸ್ಥೆ, ಮತ್ತು ಬೇಕಾದ ಔಷಧಿಗಳನ್ನು ಸಂಗ್ರಹಿಸಿಕೊಳ್ಳಬೇಕು ಸಾರ್ವಜನಿಕರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಮತ್ತು ಜನರಿಂದ ದೂರು ಬಾರದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು

ಈ ಸಂದರ್ಭದಲ್ಲಿ ತಹಶಿಲ್ದಾರ ಚಂದ್ರಶೇಖರ, ತಾಲ್ಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಮಾಣಿಕರಾವ ಪಾಟೀಲ, ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.