
ಕೋಲಾರದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮತ್ತಿತರರು ಸ್ವಾಗತಿಸಿದರು.
ಬೆಂಗಳೂರು,ಏ.೧೬- ಕಳೆದ ಲೋಕಸಭೆ ಚುನಾವಣೆಯ ಸಮಯದಲ್ಲಿ ಮೋದಿ ಉಪನಾಮದ ಹೇಳಿಕೆ ಹಿನ್ನೆಲೆಯಲ್ಲಿ ಮಾನನಷ್ಟ ಪ್ರಕರಣದಡಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯ ಸ್ಥಾನ ಕಳೆದುಕೊಂಡ ಕೋಲಾರದಿಂದಲೇ ತಕ್ಕ ಉತ್ತರ ನೀಡಲು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಾಗಿದ್ದಾರೆ.
ದೆಹಲಿಯಿಂದ ವಿಮಾನದಲ್ಲಿ ಕೆಂಪೇಗೌಡ ವಿಮಾನನಿಲ್ದಾಣದಕ್ಕೆ ಬಂಡ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ ಕೋಲಾರದಲ್ಲಿ ಆಯೋಜಿಸಿದ್ದ ಜೈಭಾರತ್ ಸಮಾವೇಶದಲ್ಲಿ ಭಾಗಿಯಾಗಿದರು.
ಕಾಂಗ್ರೆಸ್ ರಾಹುಲ್ ಗಾಂಧಿ ಅವರು ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಕೋಲಾರದಲ್ಲಿ ಜೈಭಾರತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಮೋದಿ ಉಪನಾಮ ಕುರಿತು ೨೦೧೯ ರಲ್ಲಿ ಕೋಲಾರದಲ್ಲಿ ಹೇಳಿಕೆ ನೀಡಿ ೨ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು ಹಿನ್ನೆಡೆಯಾದ ಸ್ಥಳದಿಂದಲೇ ಮತ್ತೆ ಪುಟಿದೇಳಲು ಮತ್ತು ಉತ್ತರ ನೀಡಲು ಸಜ್ಜಾಗಿದ್ದಾರೆ.ಕೋಲಾರದ ಸಮಾವೇಶ ಮುಗಿಸಿಕೊಂಡು ಸಂಜೆ ವೇಳೆಗೆ ಬೆಂಗಳೂರು ನಗರಕ್ಕೆ ವಾಪಸ್ಸಾಗಲಿರುವ ರಾಹುಲ್ ಗಾಂಧಿ ಅವರು ಸಂಜೆ ೬.೧೦ ರ ಸುಮಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಭವನದ ಹಿಂಭಾಗದಲ್ಲಿ ನೂತನ ಕಟ್ಟಡ ಇಂದಿರಾ ಗಾಂಧಿ ಭವನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ಬಾಲ್ಕಿ ಮತ್ತು ಹುಮ್ನಾಬಾದ್ ಗೆ ತೆರಳಿ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ದೆಹಲಿಗೆ ಹಿಂತಿರುಗುವರು ಎಂದು ಪಕ್ಷದ ಮೂಲಗಳು ತಿಳಿಸಿದೆ.