ಕೋಲಾರ ಬೌಲ್ಡರಿಂಗ್ ಸ್ಪರ್ಧೆ

ಕೋಲಾರ,ಏ.೪: ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಭಾರತೀಯ ಪರ್ವತಾರೋಹಣ ಸಂಸ್ಥೆಯಿಂದ ಕೋಲಾರ
ಬೌಲ್ಡರಿಂಗ್ ಸ್ಪರ್ಧೆಯನ್ನ ಇಂದು ನರಸಾಪುರದ ಖಾಜಿಕಲ್ಲಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಕೆ.ಸಿ.ನಾರಾಯಣಗೌಡ
ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸ ಗೌಡ ವಹಿಸುವರು. ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪಿ.ಯೋಗೇಶ್ವರ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಘನ ಉಪಸ್ಥಿತಿರಿರುವರು.
ಮುಖ್ಯ ಅತಿಥಿಗಳಾಗಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ವಿಧಾನಸಭಾ ಕ್ಷೇತ್ರದ
ಶಾಸಕರಾದ ಕೆ.ವೈ.ನಂಜೇಗೌಡ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಕಲಾ ಶಶಿಧರ್, ವಿಧಾನಪರಿಷತ್‌ಶಾಸಕರಾದ ನಸೀರ್ ಅಹ್ಮದ್, ಡಾ.ವೈ.ಎ.ನಾರಾಯಣಸ್ವಾಮಿ,
ಸಿ.ಆರ್.ಮನೋಹರ್, ಡಾ.ಕೆ. ಗೋವಿಂದರಾಜು, ಚಿದಾನಂದ ಎಂ.ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಪಿ.ಪುರುಷೋತ್ತಮ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಚಿನ್ನಸ್ವಾಮಿ ಗೌಡ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಸೂಲೂರು ಎಂ.ಆಂಜೀನಪ್ಪ, ನರಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಮಿತ್ರಮ್ಮ ರಾಜಣ್ಣ ಅವರು ಭಾಗವಹಿಸುವರು.