ಕೋಲಿ ಸಮಾಜ ಸಂಘದ ಅಧ್ಯಕ್ಷ ಈಶ್ವರ ಬಿಜೆಪಿಗೆ

ಬಸವಕಲ್ಯಾಣ:ಏ.05: ತಾಲ್ಲೂಕು ಟೋಕರೆ ಕೋಲಿ ಸಮಾಜ ಸಂಘದ ಅಧ್ಯಕ್ಷ ಈಶ್ವರ ಬೊಕ್ಕೆ ಈಚೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

‘ಮಾಜಿ ಸಚಿವ ಬಾಬುರಾವ್ ಚಿಂಚನಸೂರ, ಶಾಲಿನಿ ವಾಡಿಕರ್ ಅವರ ಆಹ್ವಾನದ ಮೇರೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವೆ. ಇಲ್ಲಿ ಕೋಲಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಬಿಡುಗಡೆ ಮಾಡಲಾಗಿದ್ದು, ಅದರ ನಿರ್ಮಾಣಕ್ಕಾಗಿ ಶೀಘ್ರದಲ್ಲಿ 5 ಎಕರೆ ಜಮೀನು ಕೂಡ ಸರ್ಕಾರದಿಂದ ಒದಗಿಸ ಬೇಕು’ ಎಂದು ಅವರು ಕೋರಿದರು.

ಸಚಿವ ಬಸವರಾಜ ಬೊಮ್ಮಾಯಿ, ಅಭ್ಯರ್ಥಿ ಶರಣು ಸಲಗರ ಇದ್ದರು.