
ವಿಜಯಪುರ ನ.09: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.
ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು ಓಂಃಅಔಓS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, Sಔಓಓಇ Iಟಿಜಿಡಿಚಿsಣಡಿuಛಿಣuಡಿe ಹಾಗೂ ವಿ. ಭರತ, ಯೋಜನಾ ಸಲಹೆಗಾರರು, ಓಂಃಅಔಓS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು.
ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು.
ಯೋಜನಾ ಸ್ಥಳದಲ್ಲಿ 800 ಕೆವಿ ಸಾಮಥ್ರ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚಿಸಿದರು.
ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚಿಸಿದರು.
ಯೋಜನೆಯ ಅನುμÁ್ಠನಕ್ಕೆ ಸಂಬಂಧಿಸಿದಂತೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರು ಇವರಿಗೆ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಅನುಮತಿ ಪಡೆದುಕೊಳ್ಳಲು ಹಾಗೂ ಅನುμÁ್ಠನ ಸಂಸ್ಥೆಗೆ ಬೇಕಾದ ಎಲ್ಲ ಸಹಕಾರವನ್ನು ನೀಡಲು ಸೂಚಿಸಿದರು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದಲ್ಲಿ ಸರಕಾರದಿಂದ ಮಂಜೂರಾದ 10,000 ಮೆಟ್ರಿಕ್ ಟನ್ ಸಾಮಥ್ರ್ಯದ ಅತ್ಯಾಧುನಿಕ ಶೈತ್ಯಾಗೃಹದ ಜೊತೆಗೆ ಕಲರ್ ಸಾಟಿರ್ಂಗ್ ಹಾಗೂ ಗ್ರೇಡಿಂಗ್ ಘಟಕ ನಿರ್ಮಾಣದ ಪ್ರಸ್ತಾವನೆ ಅನುಮೋದನೆಯಾಗಿದ್ದು, ಇದರ ಉದ್ದೇಶ ದ್ರಾಕ್ಷಿ ಹಣ್ಣು ಮತ್ತು ಒಣದ್ರಾಕ್ಷಿಗಳ ಸಂಗ್ರಹಣೆ, ಸಂಸ್ಕರಣೆ, ಸಾಗಣೆಯನ್ನು (ಕೋಲ್ಡ್ ಚೈನ್ ಸೌಲಭ್ಯದೊಂದಿಗೆ) ವೈಜ್ಞಾನಿಕವಾಗಿ ನಿರ್ವಹಿಸಲು ಮತ್ತು ಶೀಥಲೀಕರಿಸಿ ಸರಕು ಸಾಗಾಣಿಕೆ ಒದಗಿಸುವುದಾಗಿದೆ. ಇದರಿಂದ ಜಿಲ್ಲೆಯಲ್ಲಿನ ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಇಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಗುರುನಾಥ ಪಾಟೀಲ, ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.