ಕೋವಿಡ್‌ ಕಾರ್ಯಪಡೆ ಪುನರಚನೆ: ಡಿಸಿಎಂ ಅಶ್ವತ್ಥನಾರಾಯಣಗೆ ಹೊಣೆ

ಬೆಂಗಳೂರು, ಮೇ 3- ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದಾರೆ

ಇದುವರೆಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬದಲಿಗೆ ಕಾರ್ಯಪಡೆ ಅಧ್ಯಕ್ಷರಾಗಿ ಡಾ.ಸಿಎನ್ ಆಶ್ವಥ್ ನಾರಾಯಣ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ

ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ  ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಇದ್ದಾರೆ.

ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.