ಕೋವಿಡ್‍ನಿಂದ ಇಬ್ಬರ ಸಾವು

ವಿಜಯಪುರ ಸೆ.16: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 60 ವರ್ಷ ವಯೋಮಾನದ ವೃದ್ಧ ರೋಗಿ ಸಂಖ್ಯೆ 360308 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.
ಇವರು ಕೆಮ್ಮು, ತೀವ್ರ ಉಸಿರಾಟ ತೊಂದರೆ, ಸಿಒಪಿಡಿ ಸಂಬಂಧಿತ ಕಾಯಿಲೆಗಳಿಂದ ಬಳಲಿ, ದಿನಾಂಕ : 31-8-2020 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ : 1-9-2020 ರಂದು ಮೃತಪಟ್ಟಿದ್ದಾರೆ. ಶಿಷ್ಟಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಅದರಂತೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 45 ವರ್ಷ ವಯೋಮಾನದ ರೋಗಿ ಸಂಖ್ಯೆ 360301 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ಕೆಮ್ಮು, ತೀವ್ರ ಉಸಿರಾಟ ತೊಂದರೆ, ಎನ್‍ಐಎಲ್ ಸಂಬಂಧಿತ ಕಾಯಿಲೆಗಳಿಂದ ಬಳಲಿ, ದಿನಾಂಕ : 30-8-2020 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ : 4-9-2020 ರಂದು ಮೃತಪಟ್ಟಿದ್ದಾರೆ. ಶಿಷ್ಟಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.