ಕೋವಿಡ್‍ನಿಂದ ಓರ್ವ ವೃದ್ಧ ಸಾವು : 73 ಗುಣಮುಖ ರೋಗಿಗಳ ಬಿಡುಗಡೆ

ವಿಜಯಪುರ ಸೆ.13 : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 84 ವರ್ಷ ವಯೋಮಾನದ ವೃದ್ಧ ರೋಗಿ ಸಂಖ್ಯೆ 309311ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.
ಇವರು , ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡ,ಐಎಲ್‍ಐ ಸಂಬಂಧಿತ ಕಾಯಿಲೆಗಳಿಂದ ಬಳಲಿ, ದಿನಾಂಕ : 21-8-20ರಂದು ಆಸ್ಪತ್ರೆಗೆ ದಾಖಲು ಆಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 26-8-20 ರಂದು ಮೃತಪಟ್ಟಿದ್ದಾರೆ. ಶಿಷ್ಠಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅದರಂತೆ 73 ಕೋವಿಡ್ ಗುಣಮುಖ ರೋಗಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.