ಕೋವಿಡ್‍ನಿಂದ ಓರ್ವ ಸಾವು

ವಿಜಯಪುರ, ನ.2- ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 60 ವರ್ಷ ವಯೋಮಾನದ (ಪುರುಷ) ರೋಗಿ ಸಂಖ್ಯೆ 502511 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.
ಇವರು ತೀವ್ರ ಉಸಿರಾಟ ತೊಂದರೆ, ಕೆಮ್ಮು, ಸಕ್ಕರೆ ಕಾಯಿಲೆ, ಸಾರಿ ಸಂಬಂಧಿತ ಕಾಯಿಲೆಗಳಿಂದ ಬಳಲಿ, ದಿ.15-9-2020 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿ.28-10-2020 ರಂದು ಮೃತಪಟ್ಟಿದ್ದಾರೆ. ಶಿಷ್ಟಾಚಾರದಂತೆ ಇವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.