ಕೋವಿಡ್ ಆರೈಕೆ ಕೇಂದ್ರ ಆರಂಭ: ಪಾಟೀಲ

??????????????????????????????????????????????????????????????????????????????????????????????????????????????????????????????????????????????????????????????????????????????????????????????

ಬಾದಾಮಿ,ಜೂ3: ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕಿನ ಗ್ರಾಮೀಣ ಭಾಗದ ಕೋವಿಡ್ ಸೋಂಕಿತರಿಗೆ ಮತ್ತು ಮನೆಯಲ್ಲಿ ಐಸೋಲೇಶನ್ ಸಾಧ್ಯತೆಯಿರದ ರೋಗಿಗಳಿಗೆ ಗುಣಮಟ್ಟದ ಆರೈಕೆ, ಸೇವೆ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುವ ಸದುದ್ದೇಶದಿಂದ ಕೋವಿಡ್ ಆರೈಕೆ ಕೇಂದ್ರ ಆರಂಭವಾಗಲಿದೆ ಎಂದು ಶ್ರೀ ವೀರಪುಲಿಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯದ ಪ್ರ್ರಾಚಾರ್ಯ ಡಾ.ಬಿ.ಎಂ.ಮುಲ್ಕಿಪಾಟೀಲ ತಿಳಿಸಿದರು.
ಬುಧವಾರ ನಗರದ ಶ್ರೀ ವೀರಪುಲಿಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್ ಸಂಚಾಲಿತ ಗುಳೇದಗುಡ್ಡ ಮತ್ತು ಶ್ರೀ ವೀರಪುಲಿಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ನಗರದ ಕೋರ್ಟ್ ಎದುರಿನ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಪ್ರಾರಂಭವಾಗಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 40 ಬೆಡ್ ವ್ಯವಸ್ಥೆ ಮಾಡಲಾಗಿದ್ದು, ರೋಗಿಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಸೇವಾ ಭಾರತಿ ಅಧ್ಯಕ್ಷ ಸಂಜೀವ ಕಾರಕೂನ, ಮಾರ್ಗದರ್ಶಕ ಘನಶಾಮಜಿ ರಾಠಿ ಮಾತನಾಡಿ ಸೇವಾ ಕಾರ್ಯದ ರೂಪುರೇಷೆಗಳನ್ನು ವಿವರಿಸುತ್ತಾ, ಕೋವಿಡ್ ಆರೈಕೆ ಕೇಂದ್ರವನ್ನು ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಆರ್.ಎಸ್.ಎಸ್.ಉತ್ತರ ಪ್ರಾಂತ ಪ್ರಚಾರಕ ನರೇಂದ್ರಜಿ ಉದ್ಘಾಟನೆ ನೆರವೇರಿಸುವರು. ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಉಪಸ್ಥಿತರಿರುವರು ಎಂದರು.
ಗಿರೀಶ ದಾನಪ್ಪಗೌಡರ ಮಾತನಾಡಿ ಕೇಂದ್ರ ಸರಕಾರದ ಆಯುಷ್ ಸಚಿವಾಲಯದ ಆಯುಷ್ 64 ಔಷಧಿಗಳನ್ನು ವಿತರಿಸಲು ರಾಜ್ಯದ ನಮ್ಮ ಆಯುರ್ವೇದ ಮಹಾವಿದ್ಯಾಲಯ ಆಯ್ಕೆ ಮಾಡಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಸುತ್ತಮುತ್ತಲಿನ ಭಾಗದ ಜನರು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಸಂಗಮೇಶ ಹುನಗುಂದ, ಕಿರಣ ಪವಾಡಶೆಟ್ಟರ ಹಾಜರಿದ್ದರು.