ಕೋವಿಡ್ ಎರಡನೇ ಅಲೆ ನಿಯಂತ್ರಣ ಹಿನ್ನೆಲೆ:ಕಲಬುರಗಿ ನಗರದಾದ್ಯಂತ ಮೇ 27 ರಿಂದ 31ರವರೆಗೆ ಸಂಪೂರ್ಣ ನಿರ್ಬಂಧಗೊಳಿಸಿ ಆದೇಶ

ಕಲಬುರಗಿ,ಮೇ.26:ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ನಗರದಾದ್ಯಂತ ಇದೇ ಮೇ 27ರ ಬೆಳಿಗ್ಗೆ 6 ಗಂಟೆಯಿಂದ ಮೇ 31ರ ಬೆಳಿಗ್ಗೆ 6 ಗಂಟೆಯವರೆಗೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ವೈ.ಎಸ್. ರವಿಕುಮಾರ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.