ಕೋವಿಡ್ ಕುರಿತ ಜಿಲ್ಲಾ ಮಟ್ಟದ ತಜ್ಞರ ಸಮಿತಿ ಸದಸ್ಯರೊಂದಿಗೆ ಸಂಸದ ಡಾ. ಉಮೇಶ್ ಜಾಧವ್ ಸಭೆ ಸರ್ಕಾರ ನಿಗದಿಪಡಿಸಿದ ಬೆಡ್ ಚಾರ್ಚ್ ಮಾತ್ರ ಪಡೆಯಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಕಲಬುರಗಿ,ಏ. 25: ಕೋವಿಡ್ ಸೋಂಕಿತರನ್ನು ದಾಖಲಿಸಿಕೊಳ್ಳುವ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು, ಬೆಡ್ ಸಂಬAಧ ಸರ್ಕಾರ ನಿಗದಿಪಡಿಸಿರುವ ದರವನ್ನು ಮಾತ್ರ ಪಡೆಯಬೇಕು. ಹೆಚ್ಚಿಗೆ ಪಡೆದಲ್ಲಿ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಂಸದ ಡಾ. ಉಮೇಶ್ ಜಾಧವ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆದಿದ್ದ ಕೋವಿಡ್ ಕುರಿತ ಜಿಲ್ಲಾ ಮಟ್ಟದ ತಜ್ಞರ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಸರ್ಕಾರ ಶಿಫಾರಸ್ಸು ಮಾಡುವ ಕೋವಿಡ್ ಸೋಂಕಿತ ರೋಗಿಗಳಿಗೆ ಸರ್ಕಾರಿ ಕೋಟಾದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಇತರೆ (ಖಾಸಗಿ) ರೋಗಿಗಳಿಗೆ ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ಕೊಡಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಮಿತಿ ತಜ್ಞರು ಸೇರಿದಂತೆ ವೈದ್ಯರು ಶ್ರಮಿಸಬೇಕು ಎಂದ ಅವರು ಹೇಳಿದರು.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕರಾದ ಕನೀಜ್ ಫಾತಿಮಾ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಗುಲ್ಬರ್ಗಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಚ ದಯಾನಂದ ಧಾರವಾಡಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಶ ಶಶಿ, ಅಪರ ಜಿಲ್ಲಾಧಿಕಾರಿ ಡಾ.ಶಂಕರಣ್ಣ ವಣಿಕ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಿಲ್ ಖೇಡ್, ಜಿಮ್ಸ್ ನಿರ್ದೇಶಕಿ ಶ್ರೀಮತಿ ಡಾ. ಕವಿತಾ ಪಾಟೀಲ್, ಇಎಸ್‌ಐಸಿ ನಿರ್ದೇಶಕಿ ಡಾ. ಲೋಬೋ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ರಾಹುಲ್ ಸ್ಭೆರಿದಂತೆ ವೈದ್ಯರು ಭಾಗವಹಿಸಿದ್ದರು.