ಕೋವಿಡ್ ಕೇರ್ ಕೇಂದ್ರಗಳಿಗೆ ಬಂದು ಚಿಕಿತ್ಸೆ ಪಡೆಯಿರಿ

ಚಾಮರಾಜನಗರ, ಮೇ. 27- ಕೊರೋನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಹೋಂ ಐಸೊಲೇಷನ್ನಿಗೆ ಅವಕಾಶ ನೀಡದೇ ಕೋವಿಡ್ ಕೇರ್ ಕೇಂದ್ರಗಳಿಗೆ ಬಂದು ಚಿಕಿತ್ಸೆ ಪಡೆಯಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ಚಾಮರಾಜನಗರದ ಅಮಚವಾಡಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಟಾಸ್ಕ್ ಫೆÇೀರ್ಸ್ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದ ಇವರು, ಕೊರೋನಾ ಬಂದು ಹೋಂ ಕ್ವಾರಂಟೈನ್‍ನಲ್ಲಿರುವವರು ಕೊನೆ ಘಳಿಗೆಯಲ್ಲಿ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗಳಿಗೆ ಬರುತ್ತಾರೆ. ಈ ವೇಳೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಿಗದೆ ಸಾಯುತ್ತಿದ್ದಾರೆ. ಆದ್ದರಿಂದ ಕೊರೋನಾ ಬಂದವರು ಹೋಂ ಐಸೋಲೇಷನ್‍ನಲ್ಲಿರದೆ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ಬಂದು ಚಿಕಿತ್ಸೆ ಪಡೆಯಬೇಕು ಸಲಹೆ ನೀಡಿದರು.
ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಗುಣಮುಖರಾಗಿ ಮನೆಗಳಿಗೆ ತೆರಳುತ್ತಿದ್ದಾರೆ. ಆದ್ದರಿಂದ ಈ ಸಂಬಂಧ ಜನರಲ್ಲಿ ಅರಿವಿನ ಕೊರತೆ ಇರುವುದರಿಂದ ಈ ರೀತಿಯ ಸಮಸ್ಯೆಗಳಾಗುತ್ತಿವೆ.
ಕೊರೋನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಾಗ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯ ಎಂದು ತಿಳಿಸಿದರು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೊರೋನಾ ಸೋಂಕಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಕೊರೋನಾ ಮುಕ್ತ ಗ್ರಾಮವನ್ನಾಗಿಸಲು ಶ್ರಮಿಸಬೇಕು. ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ವೈದ್ಯರು, ಸಿಬ್ಬಂದಿಗಳಿಲ್ಲ. ಜಿಲ್ಲಾಸ್ಪತ್ರೆಗೆ ದಿನನಿತ್ಯ 6 ಸಾವಿರ ಲೀ. ಆಕ್ಸಿಜನ್ ಅವಶ್ಯಕತೆ ಇದೆ. ಆದರೆ, 300-350 ಲೀ. ಆಕ್ಸಿಜನ್ ಮಾತ್ರ ಪೂರೈಕೆಯಾಗುತ್ತಿದೆ ಎಂದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾದಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕರು ವೈಯಕ್ತಿಕವಾಗಿ 10 ಸಾವಿರ ರೂ.ಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಹೇಂದ್ರ, ತಾಲ್ಲೋಕು ಪಂಚಾಯತಿ ಇಓ ಪ್ರೇಮ್ ಕುಮಾರ್, ಉಪತಹಸೀಲ್ದಾರ್ ನಂಜಯ್ಯ, ಪಿಡಿಒ ವೀಣಾ, ವೈದ್ಯಾಧಿಕಾರಿ ಡಾ.ಸವೀನಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಇದ್ದರು.