ಕೋವಿಡ್ ಕೇರ್ ಸೆಂಟರ್ ಗಳಿಗೆ ಡಿಸಿ ಭೇಟಿ ಪರಿಶೀಲನೆ

ಬಳ್ಳಾರಿ, ಮೇ.27: ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು, ಬಂಡ್ರಿ‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸಿ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರಶ್ಮಿ ಅವರು ನಿನ್ನೆ ಸಂಜೆ ಭೇಟಿ‌ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಸೊಂಕಿತರಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿ ಸೊಂಕಿತರ ಯೋಗಕ್ಷೇಮ ವಿಚಾರಿಸಿದರು.