ಕೋವಿಡ್: ಖಾಸಗಿ ಆಸ್ಪತ್ರೆಗಳು ಸಹಕಾರ ನೀಡಬೇಕಿದೆ- ಜಿಲ್ಲಾಧಿಕಾರಿ

ಧಾರವಾಡ, ಏ.16: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಗತ್ಯವಿದ್ದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು. ಮೂಲಸೌಕರ್ಯ ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಮೊದಲಿನಂತೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಅವರು ಕಚೇರಿಯ ನೂತನ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.
ಜಿಲ್ಲಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಔಷಧ ಮತ್ತು ಹಾಸಿಗೆ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ ಅಗತ್ಯವಾದರೆ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ರೋಗಿಗಳನ್ನು ರೆಫರಲ್ (ಖeಜಿeಡಿಡಿಚಿಟ) ಪತ್ರ ನೀಡಿ ಕಳಿಸಲಾಗುವುದು ಎಂದು ಹೇಳಿದರು.
ಕೋವಿಡ್ ಚಿಕಿತ್ಸೆಗಾಗಿ ಸರ್ಕಾರವು ದರಗಳನ್ನು ನಿಗಧಿಗೊಳಿಸಿ ಅಧಿಸೂಚನೆ ಹೊರಡಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ರೆಫರಲ್(ಖeಜಿeಡಿಡಿಚಿಟ) ಪತ್ರದ ಮೂಲಕ ಕಳಿಸುವ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸಾ ದರ : ಸಾಮಾನ್ಯ ವಾರ್ಡ್ – 5200, ಹೆಚ್.ಡಿ.ಯು – 7,000, ಆಮ್ಲಜನಕ ರಹಿತ ಐಸೋಲೆಶನ್ ವಾರ್ಡ್ – 8,500, ಆಮ್ಲಜನಕ ಸಹಿತ ಐಸೋಲೆಶನ್ ವಾರ್ಡ್ – 10,000 ರೂ ಗಳನ್ನು ನಿಗದಿಪಡಿಸಲಾಗಿದೆ.

ಕೋವಿಡ್ ಪೀಡಿತರು ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಕೋವಿಡ್ ಚಿಕಿತ್ಸಾ ದರ: ಸಾಮಾನ್ಯ ವಾರ್ಡ್ – 10,000, ಹೆಚ್.ಡಿ.ಯು – 12,000, ಆಮ್ಲಜನಕ ರಹಿತ ಐಸೋಲೆಶನ್ ವಾರ್ಡ್ – 15,000, ಆಮ್ಲಜನಕ ಸಹಿತ ಐಸೋಲೆಶನ್ ವಾರ್ಡ್ – 25,000 ರೂ ಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಖಾಸಗಿ ಆಸ್ಪತ್ರೆಗಳ ವೈದ್ಯರು ಮಾತನಾಡಿ, ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತರಿಗೆ ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡಿ, ಇನ್ನಷ್ಟು ಆತ್ಮವಿಶ್ವಾಸದಿಂದ ನಿರ್ಭಯವಾಗಿ ಕೋವಿಡ್ ಕರ್ತವ್ಯ ನಿರ್ವಹಿಸಲು ಅವಕಾಸ ನೀಡಿದ ಜಿಲ್ಲಾಡಳಿತಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. ಮತ್ತು ಕಳೆದ ಬಾರಿಯಂತೆ ಈಗ ಕೋವಿಡ್ ಎರಡನೇಯ ಅಲೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಚಿಕಿತ್ಸೆ ಹಾಗೂ ಆರೋಗ್ಯ ಸೇವೆಯನ್ನು ನೀಡಲು ಜಿಲ್ಲೆಯ ಸುಮಾರು 20 ಖಾಸಗಿ ಆಸ್ಪತ್ರೆಗಳು ಸಿದ್ದವಿರುವುದಾಗಿ ಹೇಳಿದರು. ಕೋವಿಡ್ 2ನೇ ಅಲೆಯಿಂದ ಜಿಲ್ಲೆಯನ್ನು ರಕ್ಷಿಸಲು ಜಿಲ್ಲಾಡಳಿತದೊಂದಿಗೆ ಕೈಜೊಡಿಸಿ, ಎಲ್ಲರೂ ಶ್ರಮಿಸುವುದಾಗಿ ವೈದ್ಯರು ಹೇಳಿದರು.
ವೇದಿಕೆಯಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಗುರುದತ್ತ ಹೆಗಡೆ, ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣಿ ಇದ್ದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದಿನಕರ, ಆರ್‍ಸಿಎಚ್‍ಓ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ, ಡಾ. ಎಸ್.ಎಂ.ನಿಂಬಣ್ಣವರ, ಡಿಮ್ಹಾನ್ಸ್ ಆಡಳಿತಾಧಿಕಾರಿ, ಖಾಸಗಿ ಆಸ್ಪತ್ರಗಳಾದ ನವನಗರ ಕ್ಯಾನ್ಸರ್ ಆಸ್ಪತ್ರೆ, ಎಸ್‍ಡಿಎಂ ಮೇಡಿಕಲ್ ಕಾಲೇಜು, ಸುಚರಾಯು, ಅಶೋಕ ಆಸ್ಪತ್ರೆ, ವಿವೇಕಾನಂದ ಆಸ್ಪತ್ರೆ, ಸ್ಪಂದನಾ ಆಸ್ಪತ್ರೆ, ಜರ್ಮನ್ ಆಸ್ಪತ್ರೆ ಸೆರಿದಂತೆ ಸುಮಾರು 20 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ವೈದ್ಯರು ಪಾಲ್ಗೊಂಡಿದ್ದರು.