ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆ ಮೀಸಲಿಡಲು ಸೂಚನೆ

ವಿಜಯಪುರ ಏ. 19: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಶೇ 50 ರಷ್ಟು ಹಾಸಿಗೆಗಳನ್ನು ಮೀಸಲಿಡಲು ಮತ್ತು ಈ ಕುರಿತು ಜಿಲ್ಲಾಡಳಿತದಿಂದ ಅಭಿವೃದ್ದಿಪಡಿಸಲಾದ ಃeಜ ಒಚಿಟಿಚಿgemeಟಿಣ ದಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿಯನ್ನು ಅಪ್‍ಡೆಟ್ ಮಾಡಲು ಸರ್ಕಾರಿ ಮತ್ತು ಖಾಸಗಿ ಆಸ್ಪತೆಯವರಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು, ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಮುಖ್ಯಸ್ಥರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಖಇಒಆಇSIಗಿIಖ ಔಷಧಿಯನ್ನು ಪೂರೈಕೆ ಮಾಡುವ ಕಂಪನಿಗಳಿಗೆ ಔಷಧಾಲಯಗಳು ತಮ್ಮ ಭೇಡಿಕೆಯನ್ನು ಸಲ್ಲಿಸಿ, ಅದರ ಪ್ರತಿಯನ್ನು ಸಹಾಯಕ ಔಷಧಿ ನಿಯಂತ್ರಕರವರಿಗೆ ಸಲ್ಲಿಸಲು ಸದರಿಯವರು ಸರ್ಕಾರದಿಂದ ವಿಭಾಗಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ ಜಿಲ್ಲೆಗೆ ಖಇಒಆಇSIಗಿIಖ ಔಷಧಿಯ ಸರಬರಾಜು ನೋಡಿಕೊಳ್ಳುವಂತೆ ಕುರಿತು ಸೂಚಿಸಿದರು.
ಜಿಲ್ಲೆಯಲ್ಲಿ ಸದ್ಯಕ್ಕೆ ವೈದ್ಯಕೀಯ ಆಕ್ಸಿಜನ್ ಕುರಿತು ತೊಂದರೆ ಇರುವುದಿಲ್ಲ. ಕಾಲಕಾಲಕ್ಕೆ ಈ ಕುರಿತು ಸಭೆ ಜರುಗಿಸಿ, ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಈ ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಸಹಾಯಕ ಔಷಧಿ ನಿಯಂತ್ರಕರವರು ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಮುಖ್ಯಸ್ಥರು ಉಪಸ್ಥಿತರಿದ್ದರು.