ಕೋವಿಡ್ ಚಿಕಿತ್ಸೆ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ಸ್ಥಗಿತ

ನವದೆಹಲಿ ಏ.೧೯- ಕೋವಿಡ್‌ನಿಂದ ಬಳಲುವವರ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ, ೯ ಉದ್ದಿಮೆಗಳನ್ನು ಹೊರತುಪಡಿಸಿ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಈ ಸಂಬಂಧ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಈ ಆದೇಶವು ಏ. ೨೨ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಕೈಗಾರಿಕೆಗಳಿಗೆ ನೀಡಲಾಗುತ್ತಿದ್ದ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ಪೂರೈಸುವಂತೆ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತಾಧಿಕಾರ ಸಮಿತಿ ಶಿಫಾರಸು ಮಾಡಿತ್ತು.