ಕೋವಿಡ್ ಟೆಸ್ಟ್‌ನ ಮಿತಿ ಏರಿಕೆಗೆ ಮನವಿ

ಚಿತ್ರದುರ್ಗ.ನ.೧೯; ಈಗಾಗಲೇ ಕಾಲೇಜುಗಳು ಆರಂಭವಾಗಿದ್ದು, ಕಾಲೇಜನ್ನು ಪ್ರವೇಶಿಸಲು ಪ್ರತಿಯೊಬ್ಬ ವಿದ್ಯಾರ್ಥಿಯು ಕೋವಿಡ್-೧೯ ಟೆಸ್ಟ್ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿ ನಿತ್ಯ ಕೇವಲ ೩೫ ಜನಕ್ಕೆ ಮಾತ್ರ ಕೋವಿಡ್ ಟೆಸ್ಟ್‌ನ ಮಿತಿಯನ್ನು ಮಾಡಲಾಗಿದೆ.ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಆದ್ದರಿಂದ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕೋವಿಡ್ ಟೆಸ್ಟ್‌ನ ನಿತ್ಯದ ಮಿತಿಯನ್ನು ಏರಿಕೆ ಮಾಡುವಂತೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇದರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯರು ಸಹ ಪರೀಕ್ಷೆಯನ್ನು ಮಾಡಿಸುತ್ತಿದ್ದಾರೆ. ಪ್ರತಿ ನಿತ್ಯ ಕೇವಲ ೫ ರಿಂದ ೧೦ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತಾಗಿದೆ. ಅಲ್ಲದೇ ಪರೀಕ್ಷೆಗೆ ರಕ್ತವನ್ನು ತೆಗೆದುಕೊಳ್ಳುವ ಸ್ಥಳದಲ್ಲಿ ಯಾವುದೇ ರೀತಿಯ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಸೂಕ್ತ ವ್ಯವಸ್ಥೆಯು ಸಹ ಇರುವುದಿಲ್ಲ. ಆದ್ದರಿಂದ ಪರೀಕ್ಷೆಯ ಮಿತಿಯನ್ನು ೩೫ರಿಂದ ಇನ್ನೂ ಹೆಚ್ಚಿನ ಸಂಖ್ಯೆಗೆ ಏರಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪ್ರತ್ಯೇಕ ವ್ಯವಸ್ಥೆ ಅಥವಾ ಕ್ಯಾಂಪ್‌ಗಳನ್ನು ಮಾಡಿದರೆ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ.