ಕೋವಿಡ್ ಟೆಸ್ಟ್ ಹೆಚ್ಚಿಸಿ: ಡಿ.ಸಿ.

ದಾವಣಗೆರೆ.ಜೂ.೬: ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಕೋವಿಡ್ ನಿಯಂತ್ರಣದ ಹಿನ್ನೆಲೆ ಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವ ಮೂಲಕ ಸೋಂಕಿತರನ್ನು ಬೇಗ ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲು ಸೂಚಿಸಿದ ಆವರು ಕೊರೊನ ಬಗೆಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕೆಂದರು

ಹಾಗೂ ಕೋವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುವ ಸಾಧ್ಯತೆಗಳಿರುವ ಬಗೆಗೆ ತಾಂತ್ರಿಕ ಸಮಿತಿಯವರು ಮುನ್ಸೂಚನೆ ನೀಡಿದ್ದು ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿಇಓ ವಿಜಯ ಮಹಾಂತೇಶ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್ ಡಿ.ಹೆಚ್.ಓ.ನಾಗರಾಜ್,ಡಾ.ಮೀನಾಕ್ಷಿ,ಡಾ.ಮುರಳೀಧರ್ ಇದ್ದರು