ಕೋವಿಡ್ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕ್ರಮಃ ಸಚಿವ ಮುರುಗೇಶ ನಿರಾಣಿ

ವಿಜಯಪುರ, ಮೇ.4-ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳು ಪರಿಣಾಮಕಾರಿಯಾಗಿ ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾದ ಮುರುಗೇಶ ನಿರಾಣಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಜಿಲ್ಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಕೋವಿಡ್ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಗೆ ಹೋಲಿಸಿದಾಗ, ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮುತು ವರ್ಜಿಯಿಂದ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಶೇ.20 ದಾಟಿದ್ದು ವಿಜಯಪುರ ಜಿಲ್ಲೆಯಲ್ಲಿ ಶೇ. 11ರಷ್ಟು ಮಾತ್ರ ಸಾವಿನ ಪ್ರಮಾಣ ಇದ್ದು ರಾಜ್ಯದಲ್ಲಿ 27ನೇ ಸ್ಥಾನದಲ್ಲಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಈವರೆಗೆ 19 ಸಾವಿರ ಕೋವಿಡ್ ರೋಗಿಗಳನ್ನು ಚಿಕಿತ್ಸೆಗೆ ಒಳಪಡಿಸಿ ಈವರೆಗೆ ಆಸ್ಪತ್ರೆಗಳಿಂದ ಬಿಡುಗಡೆಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನ 350 ರಿಂದ 400 ಕೋವಿಡ್ ಸೋಂಕಿತರಾಗುತ್ತಿದ್ದು ತೀವ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವ್ಯವಸ್ಥೆ ಮಾಡಲಾಗುತ್ತಿದ್ದು. ಆಕ್ಸಿಜನ್ ಹಾಗೂ ರೆಮ್ ಡಿಸಿ ವರ್ ಲಸಿಕೆ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ. ಅದರಂತೆ ಅಧಿಕಾರಿಗಳನ್ನು ನೇಮಿಸಿ ಔಷಧಿಗಳ ಸಮಸ್ಯೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈವರೆಗೆ ರೆಮ್ ಡಿಸಿವರ್. ಲಸಿಕೆಯ ಕೊರತೆಯಾಗಿಲ್ಲ. ವೈದ್ಯರ ಸಲಹೆ ಮತ್ತು ಪ್ರಿಸ್ಕ್ರಿಪ್ಷನ್ ಆಧಾರದ ಮೇಲೆ ಮಾತ್ರ ಈ ಲಸಿಕೆ ಪಡೆಯುವಂತೆ ಕೋವಿಡ್ ಸೋಂಕಿತರಲ್ಲಿ ಮನವಿ ಮಾಡಿದ ಅವರು ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ನಿವಾರಣೆಗೆ ಅವಶ್ಯಕ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಆಕ್ಸಿಜನ್ ಅಧಿಕ ಪ್ರಮಾಣದಲ್ಲಿದ್ದರೆ ಖಾಲಿ ಸಿಲಿಂಡರ್‍ಗಳ ಕೊರತೆ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸ್ಥಳೀಯವಾಗಿ, ಧಾರವಾಡ ಹಾಗೂ ಬಳ್ಳಾರಿಗಳಿಂದ ಆಕ್ಸಿಜನ್ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಏಕಕಾಲಕ್ಕೆ ಎರಡು ಸಲಕರಣೆಗಳನ್ನು ಹೊಂದಿರುವ ಆಕ್ಸಿಜನ್ ಪೂರೈಕೆ ಯಂತ್ರವನ್ನು ಪ್ರತಿ ಜಿಲ್ಲೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವೈದ್ಯರು, ಹಾಗೂ ನಸ್ರ್ಗಳು ತಮ್ಮ ಜೀವನದ ಹಂಗನ್ನು ತೊರೆದು ಸೇವೆ ಸಲ್ಲಿಸುತ್ತಿದ್ದು, ಜಿಲ್ಲಾಡಳಿತ ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅದರಂತೆ ವಿವಿಧ ಕೈಗಾರಿಕೆಗಳ ವಿಶೇಷವಾಗಿ ಸಕ್ಕರೆ ಕಾರ್ಖಾನೆ ಮತ್ತು ಡಿಸ್ಟಿಲರಿ ಮೂಲಕ ಆಕ್ಸಿಜನ್ ತಯಾರಿಕೆಗು ಕೋರಲಾಗಿದೆ. ಮುಧೋಳದಲ್ಲಿ ತಮ್ಮ ಕಾರ್ಖಾನೆಗಳಲ್ಲಿ ಕೂಡ ಮುಂದಿನ ಮೂರು ತಿಂಗಳಲ್ಲಿ ಆಕ್ಸಿಜನ್ ತಯಾರಿಸುವ ಘಟಕ ಸಹ ಸ್ಥಾಪನೆಯಾಗುವ ವಿಶ್ವಾಸವಿದೆ ಎಂದ ಅವರು ಎಲ್ಲರೂ ಈ ರೋಗ ನಿಯಂತ್ರಣಕ್ಕಾಗಿ ಪಕ್ಷಾತೀತವಾಗಿ ಪ್ರಯತ್ನಿಸೋಣ ಎಂದು ಅವರು ಹೇಳಿದರು.
ರೆಮ್ಡಿಸಿವರ್ ಲಸಿಕೆ ಪ್ರತಿಯೊಬ್ಬರು ಕೋವಿಡ್ ಸೋಂಕಿತರಿಗೆ ಲಸಿಕೆ ಹಾಕಿಸಬೇಕು ಎಂಬ ಬೇಡಿಕೆ ಸರಿಯಲ್ಲ. ವೈದ್ಯ ರ ಸಲಹೆ ಮೇರೆಗೆ ಮಾತ್ರ ಪಡೆಯಬೇಕು. ಗರಿಷ್ಠ ಪ್ರಮಾಣದಲ್ಲಿ ಈ ಲಸಿಕೆ ಪಡೆಯಲು ಪ್ರಯತ್ನಿಸಲಾಗುವುದು. ಪ್ರತಿದಿನ ಜಿಲ್ಲಾಧಿಕಾರಿಗಳ ಮೂಲಕ ಕೋವಿಡ್ ನಿಯಂತ್ರಣ ಕುರಿತು ಮಾಹಿತಿ ಸಹ ಪಡೆಯಲಾಗುತ್ತಿದ್ದು ವಿವಿಧ ಕೊರತೆಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದಾಗಿ ಸಚಿವರು ಹೇಳಿದರು.