ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

ಲಿಂಗಸುಗೂರು.ಏ.೨೪-ಸಾರ್ವಜನಿಕರ ಸಹಕಾರ ಇದ್ದರೆ ಮಾತ್ರ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯವೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸುತ್ತಿಲ್ಲ, ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಆತಂಕವೇ ಇಲ್ಲದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದಾರೆ. ದಯವವಿಟ್ಟು ಸಾರ್ವಜನಿಕರು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕಾರ ನೀಡಬೇಕು ಎಂದರು. ಕೊರೊನಾ ಇರಲಿ ಇನ್ಯಾವ್ಯಾದೇ ಕಾರ್ಯಕ್ರಮವಿದ್ದರೂ ಅದಕ್ಕೆ ಮೊದಲು ಸ್ಪಂದಿಸುವುದು ಲಿಂಗಸುಗೂರು ತಾಲೂಕಿನ ಆರೋಗ್ಯ ಇಲಾಖೆ ತಂಡ ಎಂದರು. ಅಂಬುಲೈನ್ಸ್ ಕೊರತೆಯಗಾದಂತೆ ಹಟ್ಟಿ ಚಿನ್ನದಗಣಿ ಆಸ್ಪತ್ರೆಯಲ್ಲಿರುವ ಮೂರು ಅಂಬ್ಯಲೈನ್ಸ್ ವಾಹನಗಳನ್ನು ತಾತ್ಕಲಿಕವಾಗಿ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆ ಮಾಡಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ್, ಹಾಗೂ ಇನ್ನಿತರರ ಸಿಬ್ಬಂದಿಗಳು ಇದ್ದರು.