ಕೋವಿಡ್ ನಿಯಂತ್ರಣ ಕ್ರಮ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ

ವಿಜಯಪುರ, ಮೇ.4-ಸಚಿವ ಮುರುಗೇಶ ನಿರಾಣಿ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಹಾಗೂ ರೆಮ್ ಡಿಸಿವರ್ ಲಸಿಕೆ ಸಮಸ್ಯೆ ಪರಿಹಾರದ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾ ಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಹೊಸ ಮರಳು ನೀತಿ ಕರಡು ಪ್ರತಿ ಸಿದ್ದ: ಹೊಸ ಮರಳು ನೀತಿ ಕರಡು ಪ್ರತಿ ಸಿದ್ಧಪಡಿಸಿದ್ದು, ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ರಾಜ್ಯದ ಎಲ್ಲಾ ಜಿಲ್ಲಾ ಆಡಳಿತಗಳಿಗೆ ಕಳುಹಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರು ಹೇಳಿದರು.
ಈ ನೂತನ ಮರಳು ನೀತಿಗೆ ಅಭಿಪ್ರಾಯ ಪಡೆದ ನಂತರ ಶೀಘ್ರದಲ್ಲಿಯೇ ಹೊಸ ಮರಳು ನೀತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು. ಅದರಂತೆ ಜಿಲ್ಲೆಯಲ್ಲಿ ಕ್ರಷರ್ ಗಳು ಬಂದ ಆಗಬಾರದು. ಮಾರುಕಟ್ಟೆಯಲ್ಲಿ ವಸ್ತುಗಳ ಕೊರತೆ ಆಗಬಾರದು ಹಾಗೂ ಕ್ರಷರ್ ಗಳು ಸುರಳೀತವಾಗಿ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಿದರು.
ಇದೆ ಸಂದರ್ಭದಲ್ಲಿ ಸಚಿವರು, ನೂತನ ಗಣಿ, ಮತ್ತು ನೂತನ ಮರಳು ನೀತಿ ಹಾಗೂ ನೂತನ ಗಣಿ ಅದಾಲತ್ ಬಗ್ಗೆಯೂ ರಾಜ್ಯಮಟ್ಟದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಆಕ್ಸಿಜನ್ ಕೊರತೆ ನೀಗಿಸುವಲ್ಲಿ ಹಾಗೂ ರೆಮ್ಡಿಸಿವರ್ ಲಸಿಕೆ ನಿರ್ವಹಣೆಯಲ್ಲಿ ಹಿರಿಯ ಅಧಿಕಾರಿಗಳಾದ ಔದ್ರಾಮ್ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಚಿವರ ಗಮನಕ್ಕೆ ತಂದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಸೇರಿದಂತೆ, ಆರೋಗ್ಯ ಇಲಾಖೆ ಇತರೆ ಅಧಿಕಾರಿಗಳು, ಉಪಸ್ಥಿತರಿದ್ದರು.