ಕೋವಿಡ್ ನಿಯಂತ್ರಣ ಸುತ್ತೋಲೆ ಹೊರಡಿಸಲು ಮುಖ್ಯ ಕಾರ್ಯದರ್ಶಿ ಅಧಿಕಾರ

ಬೆಂಗಳೂರು, ಮಾ 29- ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ಮುಖ್ಯ ಕಾರ್ಯದರ್ಶಿ ಅದೇಶ, ಸುತ್ತೋಲೆಗಳನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
ಕೋವಿಡ್ ವಿಚಾರದಲ್ಲಿ ಲಾಕ್ ಡೌನ್, ಮಿನಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತು ಇಂದು ಅಧಿಕೃತವಾಗಿ ಹೊರಡಿಸಿರುವ ಆದೇಶದಲ್ಲಿ ಮುಖ್ಯ ಕಾರ್ಯದರ್ಶಿ ಹೊರತುಪಡಿಸಿ ಯಾರೂ ಆದೇಶ ಹೊರಡಿಸಬಾರದು ಎಂದು‌ ಎಚ್ಚರಿಕೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿ ಯವರು ತಮ್ಮ ಅನುಮೋದನೆ ಪಡೆದ ಬಳಿಕ ಆದೇಶ ಮತ್ತು ಸುತ್ತೋಲೆಗಳನ್ನು ಹೊರಡಿಸಬೇಕು‌ ಎಂದು ಸೂಚಿಸಿದ್ದಾರೆ.