ಕೋವಿಡ್ ನಿಯಂತ್ರಿಸಲು ಕೈಜೋಡಿಸಲು ಕರೆ

ಹೊನ್ನಾಳಿ.ಏ.೨೫ : ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಜನರಲ್ಲಿ ಮನವಿ ಮಾಡಿದ್ದರೆ.. ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿರುವ ರೇಣುಕಾಚಾರ್ಯ ತಮಗೆ ಕೋವಿಡ್ ಸೋಂಕು ತಗುಲಿದೆ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಹೋಮ್ ಐಸಲೋಷನ್‌ನಲ್ಲಿದ್ದು ವಿಶ್ರಾಂತಿ ಪಡೆಯುತ್ತಿದ್ದು ನನ್ನ ಆರೋಗ್ಯ ಸ್ಥಿರವಾಗಿದೆ ಎಂದರು.ನಿಮ್ಮೆಲ್ಲರ ಹರಕೆ ಹಾರೈಕೆ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖವಾಗಿ ನಾನು ನಿಮ್ಮಗಳ ಸೇವೆಗೆ ಮರಳುತ್ತೇನೆಂದ ಶಾಸಕರು, ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಿಮ್ಮೊಂದಿಗೆ ನಾನಿಲ್ಲಾ ಎಂಬ ನೋವು ನನ್ನನ್ನು ಕಾಡುತ್ತಿದೆ ಎಂದರು.ಕೋವಿಡ್ ಸೋಂಕಿನಿಂದ ನಾನು ವಿಶ್ರಾಂತಿ ಪಡೆಯುತ್ತಿದ್ದರೂ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಕ್ತ ಮಾರ್ಗದರ್ಶನ ನೀಡುವುದರ ಜೊತೆ ಅವಳಿ ತಾಲೂಕಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳು ಸೂಚಿಸಿದ್ದೇನೆ ಎಂದರು.ಕೋವಿಡ್ ಎರಡನೆ ಅಲೆ ಹೆಚ್ಚುತ್ತಿದ್ದು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಶಾರೀರಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್ ನಿಂದ ಸುರಕ್ಷಿತರಾಗಿವಂತೆ ಶಾಸಕರು ವಿನಂತಿ ಮಾಡಿದ್ದಾರೆ.ಯೋಗಾಸನ,ಪ್ರಾಣಾಯಾಮ,ವಾಯುವಿಹಾರ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೇ ಎಂದ ರೇಣುಕಾಚಾರ್ಯ, ಪ್ರತಿಯೊಬ್ಬರೂ ಇದನ್ನು ಮೈಗೊಡಿಸಿಕೊಳ್ಳುವಂತೆ ಸಲಹೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಎರಡು ಹಂತದಲ್ಲಿ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಿದ್ದು ಇದೀಗ ಮೂರನೇ ಹಂತದಲ್ಲಿ ಮೇ 1 ರಿಂದ 18 ವರ್ಷ ಮೇಲ್ಟಟ್ಟವರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ನಿರ್ಧರಿಸಿದ್ದು ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವಂತೆ ಸೂಚನೆ ನೀಡಿದರು.ಅಷ್ಟೇ ಅಲ್ಲದೇ ಪ್ರಧಾನಮಂತ್ರಿ ಗರೀಬಿ ಕಲ್ಯಾಣ ಅನ್ನ ಯೋಜನೆಯಡಿ 80 ಕೋಟಿ ಬಡವರಿಗೆ, ಒಬ್ಬರಿಗೆ 5 ಕೆ.ಜಿ ಯಂತೆ ಎರಡು ತಿಂಗಳು ಉಚಿತವಾಗಿ ಆಹಾರ ಧಾನ್ಯ ನೀಡಲು ಪ್ರಧಾನಮಂತ್ರಿಗಳು ನಿರ್ಧರಿಸಿದ್ದು ಸ್ವಾಗತಾರ್ಹ ಎಂದರು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಒಂದು ಕೋಟಿ ಲಸಿಕೆ ಖರೀದಿ ಮಾಡಿದ್ದು ಪ್ರತಿಪಕ್ಷಗಳು ಇದನ್ನು ಟೀಕಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲಾ ಎಂದ ರೇಣುಕಾಚಾರ್ಯ ಪ್ರತಿಪಕ್ಷಗಳು ಕೋವಿಡ್ ನಂತಹ ಸಂದರ್ಭದಲ್ಲಿ ಸಹಕಾರ ನೀಡುವ ಬದಲು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದರು.ಕೋವಿಡ್ ನಂತರ ಸಂದರ್ಭದಲ್ಲಿ ಪ್ರತಿಪಕ್ಷ ಆಡಳಿತ ಪಕ್ಷ ಎಂಬ ಬೇದಭಾವವನ್ನು ಬಿಟ್ಟು ಪ್ರತಿಯೊಬ್ಬರೂ ಕೂಡ ಕೋವಿಡ್ ನಿಯಂತ್ರಿಸಲು ಕೈಜೋಡಿಸುವಂತೆ ಪ್ರತಿಪಕ್ಷಗಳಿಗೆ ಕರೆ ನೀಡಿದರು.