ಕೋವಿಡ್ ನಿಯಮ‌ ಉಲ್ಲಂಘನೆ: ರಿಲಿಯನ್ಸ್ ಫ್ರೆಶ್ ಮಾರ್ಟ್, ಹೋಟೆಲ್ ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು, ಏ.6- ಕೋವಿಡ್ ನಿಯಮ ಪಾಲಿಸದ ರಿಲಿಯನ್ಸ್ ಫ್ರೆಶ್ ಮಾರ್ಟ್ ಹಾಗೂ ಉಡುಪಿ ಕೈರುಚಿ ಹೋಟಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ.

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಡಿ. ಗ್ರೂಫ್ ಬಡಾವಣೆ, ಮುದ್ದಿನ ಪಾಳ್ಯದಲ್ಲಿ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ಉಡುಪಿ ಕೈರುಚಿ ಹೋಟೆಲ್ ಮೇಲೆ‌ ಮಂಗಳವಾರ ದಾಳಿ ನಡೆಸಿದ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ನಿಯಮಗಳನ್ನು ಉಲ್ಲಂಘನೆ ಪ್ರಕರಣ ಪತ್ತೆಹಚ್ಚಿದ್ದಾರೆ.

ಸಾಮಾಜಿಕ ಅಂತರ ಕಾಪಾಡದಿರುವುದು, ಮಾಸ್ಕ್ ಧರಿಸದೇ ಇರುವ ಹಾಗೂ ಸ್ಯಾನಿಟೈಸರ್ ಉಪಯೋಗಿಸದಿರುವ, ಥರ್ಮಲ್ ಸ್ಕ್ಯಾನಿಂಗ್ ಮಾಡದೇ ಇರುವುದು ಪತ್ತೆಯಾಗಿದೆ. ಮುಚ್ಚಲಾಗಿದೆ ಎಂದು ರಾಜರಾಜೇಶ್ವರಿ ನಗರ ವಲಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ತಿಳಿಸಿದ್ದಾರೆ.